HMT ವಶದಲ್ಲಿದ್ದ ಪೀಣ್ಯದ 5 ಎಕರೆ ಭೂಮಿ ಮರುವಶಕ್ಕೆ ಪಡೆದ ಅರಣ್ಯ ಇಲಾಖೆ: ಲಾಲ್ ಬಾಗ್, ಕಬ್ಬನ್ ಪಾರ್ಕ್ ರೀತಿಯಲ್ಲಿ ಬೃಹತ್ ವೃಕ್ಷೋದ್ಯಾನ ನಿರ್ಮಿಸುವ ಚಿಂತನೆ

ಬೆಂಗಳೂರು: ಪೀಣ್ಯ ಪ್ಲಾಂಟೇಷನ್ ನಲ್ಲಿ ಹೆಚ್.ಎಂ.ಟಿ ವಶದಲ್ಲಿದ್ದ 5 ಎಕರೆ ಭೂಮಿಯನ್ನು ಅರಣ್ಯ ಇಲಾಖೆ ಮರು ವಶಪಡಿಸಿಕೊಂಡಿದೆ.

ಪೀಣ್ಯ ಪ್ಲಾಂಟೇಷನ್ ನಲ್ಲಿ ಲಾಲ್ ಬಾಗ್ ರೀತಿಯಲ್ಲಿ ಬೃಹತ್ ಉದ್ಯಾನವನ ನಿರ್ಮಾಣ ಮಾಡಬೇಕು ಎಂಬ ಅರಣ್ಯ ಸಚಿವ ಈಶ್ವರ ಖಂಡ್ರೆ ಆಶಯದಂತೆ ಇದೀಗ ಅರಣ್ಯ ಇಲಾಖೆ ಅಧಿಕಾರಿಗಳು ಎಚ್ಎಂಟಿ ವಶದಲ್ಲಿರುವ ಪೀಣ್ಯ ಪ್ಲಾಂಟೇಷನ್ ನ 599 ಎಕರೆ ಅರಣ್ಯದ ಪೈಕಿ ಅರಣ್ಯ ಸ್ವರೂಪದ ಮತ್ತು ಖಾಲಿ ಜಮೀನು 5 ಎಕರೆಯನ್ನು ವಶಕ್ಕೆ ಪಡೆದು, ಅರಣ್ಯ ಇಲಾಖೆ ನಾಮಫಲಕ ಹಾಕಲಾಗಿದೆ.

1896 ಮೇ 29ರ ಸರ್ಕಾರದ ಅಧಿಸೂಚನೆ ಸಂಖ್ಯೆ 10407, ಎಫ್.ಟಿ.ಎಫ್. 153-95 ಮತ್ತು 1901ರ ಜನವರಿ 7ರ ಅಧಿಸೂಚನೆ ಸಂಖ್ಯೆ 422-ಎಫ್.ಟಿ.ಎಫ್.-15-1900ರ ರೀತ್ಯ ಪೀಣ್ಯ, ಜಾಲಹಳ್ಳಿ ಪ್ಲಾಂಟೇಷನ್ ನಲ್ಲಿರುವ 599 ಎಕರೆ ಜಮೀನು ಅರಣ್ಯವಾಗಿರುತ್ತದೆ. ಅರಣ್ಯೇತರ ಉದ್ದೇಶಕ್ಕೆ ಭೂಪರಿವರ್ತನೆ ಆಗದ ಈ ಜಮೀನು once a forest is always a forest ಎಂಬ ಸುಪ್ರೀಂಕೋರ್ಟ್ ಅಭಿಪ್ರಾಯದಂತೆ ಅರಣ್ಯವೇ ಆಗಿದೆ ಎಂದು ಸಚಿವ ಈಶ್ವರ ಖಂಡ್ರೆ ತಿಳಿಸಿದ್ದರು.ಈ ಜಮೀನು ಜಮೀನು ಅರಣ್ಯ ಸ್ವರೂಪ ಕಳೆದುಕೊಂಡಿದೆ ಎಂದು ಡಿನೋಟಿಫಿಕೇಷನ್ ಗೆ ಅನುಮತಿ ಕೋರಿ ಅರಣ್ಯಾಧಿಕಾರಿಗಳು ನಿಯಮಬಾಹಿರವಾಗಿ ಸಲ್ಲಿಸಿದ್ದ ಇಂಟರ್ ಲೊಕೇಟರಿ ಅಪ್ಲಿಕೇಶನ್ (ಐ.ಎ.) ಹಿಂಪಡೆಯಲೂ ಸೂಚನೆ ನೀಡಿದ್ದರು.

ಈ ನಡುವೆ ಎಚ್ಎಂಟಿ ತನ್ನ ವಶದಲ್ಲಿದ್ದ ಅರಣ್ಯ ಭೂಮಿಯ ಪೈಕಿ 165ಕ್ಕೂ ಹೆಚ್ಚು ಎಕರೆ ಜಮೀನನ್ನು ಕೇವಲ 300 ಕೋಟಿ ರೂಪಾಯಿಗಳಿಗೆ ಖಾಸಗಿ ಮತ್ತು ಸರ್ಕಾರದ ವಿವಿಧ ಸಂಸ್ಥೆಗಳಿಗೆ ಮಾರಾಟ ಮಾಡಿತ್ತು.

ಇದೀಗ ಈ ಭೂಮಿಯನ್ನು ವಶಕ್ಕೆ ಪಡೆದಿರುವ ಅರಣ್ಯ ಇಲಾಖೆ ವೃಕ್ಷೋದ್ಯಾನ ನಿರ್ಮಿಸಿ ಆ ಭಾಗದ ಜನರಿಗೆ ಅತ್ಯುತ್ತಮ ಶ್ವಾಸತಾಣ ಮಾಡುವ ಆಶಯವನ್ನು ಹೊಂದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read