ಮೈಸೂರು: ಮುಂದಿನ ಚುನಾವಣೆಯಲ್ಲೂ ನನ್ನ ಕೈಹಿಡಿಯಿರಿ ಎಂದು ಸ್ವಕ್ಷೇತ್ರ ವರುಣಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕ್ಷೇತ್ರದ ಮತದಾರರಿಗೆ ಮನವಿ ಮಾಡಿದ್ದಾರೆ. ಅವರ ಮನವಿ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.
ವರುಣಾ ಕ್ಷೇತ್ರದ ವ್ಯಾಪ್ತಿಯ ಹದಿನಾರು ಗ್ರಾಮದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು ಸ್ವಕ್ಷೇತ್ರ ವರುಣಾ ಜನರ ಮುಂದೆ ತಮ್ಮ ಮನದಾಳ ವ್ಯಕ್ತಪಡಿಸಿದ್ದಾರೆ.
ಈಗ ನನ್ನನ್ನು ನೀವು ಹೇಗೆ ಬೆಳೆಸಿದ್ದಿರೋ ಅದೇ ರೀತಿ ಮುಂದೆಯೂ ನನಗೆ ಶಕ್ತಿ ತುಂಬಬೇಕು. ಮುಂದಿನ ಚುನಾವಣೆಯಲ್ಲಿಯೂ ನೀವು ನನ್ನ ಕೈ ಹಿಡಿದು ಮುನ್ನಡೆಸಬೇಕು. ಆಗ ಈಗ ವರುಣಾ ಕ್ಷೇತ್ರಕ್ಕೆ ಇನ್ನೂ ಹೆಚ್ಚಿನ ಕೆಲಸ ಮಾಡಲು ಅನುಕೂಲವಾಗುತ್ತದೆ ಎಂದು ಹೇಳಿದ್ದಾರೆ.