HomeKarnatakaನಾಳೆ ಹುಬ್ಬಳ್ಳಿಯಲ್ಲಿ ಹೋಳಿ ಹಬ್ಬ ಆಚರಣೆ: ಮದ್ಯಪಾನ, ಮದ್ಯ ಮಾರಾಟ ನಿಷೇಧಿಸಿ ಆದೇಶ

ನಾಳೆ ಹುಬ್ಬಳ್ಳಿಯಲ್ಲಿ ಹೋಳಿ ಹಬ್ಬ ಆಚರಣೆ: ಮದ್ಯಪಾನ, ಮದ್ಯ ಮಾರಾಟ ನಿಷೇಧಿಸಿ ಆದೇಶ

ಧಾರವಾಡ: ಧಾರವಾಡ ಜಿಲ್ಲೆಯ ಹುಬ್ಬಳ್ಳಿ ನಗರದಲ್ಲಿ ನಾಳೆ(ಮಾ.7) ಹೋಳಿ ಹಬ್ಬವನ್ನು ಆಚರಿಸುವ ಹಿನ್ನಲೆಯಲ್ಲಿ, ಹುಬ್ಬಳ್ಳಿ ಗ್ರಾಮೀಣ ತಾಲೂಕಿನಾದ್ಯಂತ ಹಳ್ಳಿಗಳಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಮದ್ಯಪಾನ, ಮದ್ಯ ಮಾರಾಟ, ಸಾಗಾಟನ್ನು ನಿಷೇಧಿಸಿ ಜಿಲ್ಲಾದಿಕಾರಿಗಳು ಆದೇಶಿಸಿದ್ದಾರೆ.

ದಿನಾಂಕ 07-03-2026 ರಂದು ಬೆಳಿಗ್ಗೆ 00:01 ರಿಂದ 07-03-2026 ರಾತ್ರಿ 23:59 ಗಂಟೆಯವರೆಗೆ ಹುಬ್ಬಳ್ಳಿ ಗ್ರಾಮೀಣ ಠಾಣಾ ವ್ಯಾಪ್ತಿಯ ಗ್ರಾಮಗಳಲ್ಲಿ ಹೋಳಿ ಹಬ್ಬವನ್ನು ಆಚರಿಸುವ ಸಮಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಿಕೊಂಡು ಬರುವ ಹಿತದೃಷ್ಟಿಯಿಂದ ಮದ್ಯಪಾನ, ಮದ್ಯ ಮಾರಾಟ, ಸಾಗಾಟನ್ನು ನಿಷೇಧಿಸಲಾಗಿದೆ. 

ಆದ್ದರಿಂದ ಧಾರವಾಡ ಜಿಲ್ಲೆಯ ಹುಬ್ಬಳ್ಳಿ ಗ್ರಾಮೀಣ ಠಾಣಾ ವ್ಯಾಪ್ತಿಯ ಗ್ರಾಮಗಳಲ್ಲಿ ಯಾವತ್ತೂ ಭಾರತೀಯ ತಯಾರಿಕೆ ಮದ್ಯದ ಅಂಗಡಿಗಳು, ಬಿಯರ್ ಬಾರ್‍ಗಳು, ಕ್ಲಬ್‍ಗಳು ಮತ್ತು ಮದ್ಯದ ಡಿಪೋಗಳನ್ನು ಮುಚ್ಚತಕ್ಕದ್ದು. ಇದಲ್ಲದೇ ಪರಿಸ್ಥಿತಿಗನುಗುಣವಾಗಿ ಸಾರ್ವಜನಿಕ ಶಾಂತತೆಯನ್ನು ಕಾಯ್ದುಕೊಂಡು ಬರುವ ಹಿತದೃಷ್ಟಿಯಿಂದ ವಲಯ ಅಬಕಾರಿ ಇನ್ಸ್‍ಪೆಕ್ಟರ್ ಹಾಗೂ ಉಪ ವಿಭಾಗ ಅಬಕಾರಿ ಅಧೀಕ್ಷಕರು, ಕರ್ನಾಟಕ ಅಬಕಾರಿ ಕಾಯ್ದೆ 1965 ರ ಸಲಂ 21(2) ರಸ್ತೆಯ ಅವಶ್ಯಕತೆ ಕಂಡುಬಂದಲ್ಲಿ ಶಾಂತಿ ಪಾಲನೆಗಾಗಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಅವರು ಆದೇಶಿಸಿದ್ದಾರೆ. 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಬಕಾರಿ ಉಪ ಆಯುಕ್ತರು, ಧಾರವಾಡ ಮತ್ತು ಅಧೀಕ್ಷಕರು, ಧಾರವಾಡ, ಹೆಚ್ಚುವರಿ ಅಬಕಾರಿ ಅಧೀಕ್ಷಕರು, ಧಾರವಾಡ ಮತ್ತು ಅಬಕಾರಿ ಉಪ ಅಧೀಕ್ಷಕರು(ವಿಚಕ್ಷಕ ದಳ), ಹುಬ್ಬಳ್ಳಿ ಇವರುಗಳು ಧಾರವಾಡ ಜಿಲ್ಲಾ ವ್ಯಾಪ್ತಿಯಲ್ಲಿ ಸದರ ಆದೇಶವನ್ನು ಪರಿಣಾಮಕಾರಿಯಾಗಿ ಜಾರಿಗೆ ಬರುವಂತೆ ಕ್ರಮ ಜರುಗಿಸಲು ಜಿಲ್ಲಾಧಿಕಾರಿಗಳು ನಿರ್ದೇಶಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular