ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆ

ಮಂಗಳೂರು/ ಉಡುಪಿ: ಭಾರಿ ಮಳೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಮೇ 30ರಂದು ರಜೆ ಘೋಷಣೆ ಮಾಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಮಳೆ ಕಾರಣ ಶಾಲೆಗಳು, ಅಂಗನವಾಡಿಗಳಿಗೆ ರಜೆ ನೀಡಿ ಆದೇಶ ಹೊರಡಿಸಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು ಮತ್ತು ಒಂದರಿಂದ ಹತ್ತನೇ ತರಗತಿಯವರೆಗೆ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ, ಎಸ್ಎಸ್ಎಲ್ಸಿ ಪೂರಕ ಪರೀಕ್ಷೆ ಎಂದಿನಂತೆ ನಡೆಯಲಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read