ನಾಳೆ ಶ್ರೀ ಕ್ಷೇತ್ರ ತಲಕಾವೇರಿಯಲ್ಲಿ ‘ಪವಿತ್ರ ತೀರ್ಥೋದ್ಭವ’

ಮಡಿಕೇರಿ : ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖೆ ವತಿಯಿಂದ ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯದಲ್ಲಿ ಅಕ್ಟೋಬರ್, 17 ರಂದು ರಾತ್ರಿ 1 ಗಂಟೆ 27 ನಿಮಿಷಕ್ಕೆ ಸಲ್ಲುವ ಕರ್ಕಾಟಕ ಲಗ್ನದಲ್ಲಿ ಶ್ರೀ ಮೂಲ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವದ ಪುಣ್ಯ ಕಾಲ ನೆರವೇರಲಿದೆ.

ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾ ರೆಡ್ಡಿ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಶಾಸಕರಾದ ಡಾ.ಮಂತರ್ ಗೌಡ, ಸಂಸದರಾದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಭಾಗಮಂಡಲ ಗ್ರಾ.ಪಂ. ಅಧ್ಯಕ್ಷರಾದ ಎ.ಕಾಳನ ರವಿ ಇತರರು ಪಾಲ್ಗೊಳ್ಳಲಿದ್ದಾರೆ.

ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯ ಆಯುಕ್ತರಾದ ಎಚ್.ಬಸವರಾಜು, ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ, ಉಪ ವಿಭಾಗಾಧಿಕಾರಿ ಡಾ.ಯತೀಶ್ ಉಲ್ಲಾಳ್, ತಹಶೀಲ್ದಾರ್ ಪಿ.ಸಿ.ಪ್ರವೀಣ್ ಕುಮಾರ್, ಶ್ರೀಭಗಂಡೇಶ್ವರ-ತಲಕಾವೇರಿ ದೇವಾಲಯದ ಹೆಚ್ಚುವರಿ ಕಾರ್ಯನಿರ್ವಾಹಕ ಅಧಿಕಾರಿ ಎನ್.ಜಿ.ಚಂದ್ರಶೇಖರ್, ತಕ್ಕ ಮುಖ್ಯಸ್ಥರಾದ ಬಳ್ಳಡ್ಕ ಸಿ.ಅಪ್ಪಾಜಿ, ಕೋಡಿ.ಯು. ಮೋಟಯ್ಯ, ಸಿಬ್ಬಂದಿ ವರ್ಗದವರು ಇತರರು ಪಾಲ್ಗೊಳ್ಳಲಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read