ಉಡುಪಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕೊಂದರೆ ಹಿಂದೂಗಳಿಗೆ ನೆಮ್ಮದಿ ಎಂದು ಅವರ ವಿರುದ್ಧ ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್ ನಲ್ಲಿ ಬೆದರಿಕೆ ಪೋಸ್ಟ್ ಹಾಕಿದ್ದ ವ್ಯಕ್ತಿಯನ್ನು ಭಾನುವಾರ ಕಾರ್ಕಳ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕಾರ್ಕಳ ತಾಲೂಕು ಸಾಣೂರು ನಿವಾಸಿ ಸಂಪತ್ ಸಾಲಿಯಾನ್ ಬಂಧಿತ ಆರೋಪಿ. ಬೆಂಗಳೂರಿನಲ್ಲಿ ಹೋಂಗಾರ್ಡ್ ಕೆಲಸ ಮಾಡುತ್ತಿದ್ದ ಸಂಪತ್ ಸಾಲಿಯಾನ್, ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕೊಂದರೆ ಹಿಂದೂಗಳಿಗೆ ನೆಮ್ಮದಿ ಎಂದು ಮೇ 2ರಂದು ಪೋಸ್ಟ್ ಹಾಕಿದ್ದಾನೆ.
ಈ ಕುರಿತಾಗಿ ಕಾರ್ಕಳದ ಸೂರಜ್ ಶೆಟ್ಟಿ ನಕ್ರೆ ಕಾರ್ಕಳ ನಗರ ಠಾಣೆ ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣದ ದಾಖಲಿಸಿಕೊಂಡು ಪೊಲೀಸರು ಭಾನುವಾರ ಆರೋಪಿ ಸಂಪತ್ ಸಾಲಿಯಾನ್ ನನ್ನು ಬಂಧಿಸಿದ್ದಾರೆ.