HomeKarnatakaBIG NEWS: ಗೃಹ ಸಚಿವ ಅರಗ ಜ್ಞಾನೇಂದ್ರ ಅವರ ಭದ್ರತೆಗೆ ನಿಯೋಜನೆಗೊಂಡಿದ್ದ ಪೊಲೀಸ್ ಸಿಬ್ಬಂದಿ ಆತ್ಮಹತ್ಯೆಗೆ...

BIG NEWS: ಗೃಹ ಸಚಿವ ಅರಗ ಜ್ಞಾನೇಂದ್ರ ಅವರ ಭದ್ರತೆಗೆ ನಿಯೋಜನೆಗೊಂಡಿದ್ದ ಪೊಲೀಸ್ ಸಿಬ್ಬಂದಿ ಆತ್ಮಹತ್ಯೆಗೆ ಯತ್ನ

ಬೆಂಗಳೂರು: ಗೃಹ ಸಚಿವ ಅರಗ ಜ್ಞಾನೇಂದ್ರ ಅವರ ಭದ್ರತೆಗೆ ನೇಮಕಗೊಂಡಿದ್ದ ಪೊಲೀಸ್ ಸಿಬ್ಬಂದಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಳಕಿಗೆ ಬಂದಿದೆ.

ಗೃಹ ಸಚಿವರ ಮನೆ ಮುಂದೆಯೇ ಪೊಲೀಸ್ ಕಾನ್ಸ್ ಟೇಬಲ್ ಚಾಕುವಿನಿಂದ ಕೈ ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ನವೀನ್ ಆತ್ಮಹತ್ಯೆಗೆ ಯತ್ನಿಸಿದ ಕಾನ್ಸ್ ಟೇಬಲ್. ತಕ್ಷಣ ಗಮನಿಸಿದ ಇತರ ಪೊಲೀಸ್ ಸಿಬ್ಬಂದಿಗಳು ನವೀನ್ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನವೀನ್ ಅವರನ್ನು ಗೃಹ ಸಚಿವ ಅರಗ ಜ್ಞಾನೇಂದ್ರ ಅವರ ಭದ್ರತೆಗಾಗಿ ನಿಯೋಜಿಸಲಾಗಿತ್ತು ಎಂದು ತಿಳಿದುಬಂದಿದೆ. ಆದರೆ ಏಕಾಏಕಿ ನವೀನ್ ಆತ್ಮಹತ್ಯೆಗೆ ಯತ್ನಿಸಿರುವುದರ ಹಿಂದಿನ ಕಾರಣ ತಿಳಿದುಬಂದಿಲ್ಲ. ಪ್ರಕರಣ ಅನುಮಾನಕ್ಕೆ ಕಾರಣವಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular