ನೋಂದಣಿಯಾಗದ ಮೈಕ್ರೋ ಫೈನಾನ್ಸ್ ಗಳ ವಿರುದ್ಧ ಕ್ರಮ: ಸಚಿವ ಪರಮೇಶ್ವರ್

ಬೆಂಗಳೂರು: ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಗೆ ನೋಂದಣಿ ಕಡ್ಡಾಯವಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಅವರು ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಮಾತನಾಡಿ, ರಾಜ್ಯ ಸರ್ಕಾರವು ‘ಕರ್ನಾಟಕ ಕಿರುಸಾಲ ಮತ್ತು ಸಣ್ಣ ಸಾಲ( ಬಲವಂತದ ಕ್ರಮಗಳ ಪ್ರತಿಬಂಧಕ) ಅಧ್ಯಾದೇಶ 2025 ಅನ್ನು ಜಾರಿಗೆ ತಂದಿದೆ. ನೋಂದಣಿಯಾಗದ, ಸುರಕ್ಷತಾ ಕ್ರಮಗಳನ್ನು ಅನುಸರಿಸದ, ಸಾರ್ವಜನಿಕರೊಂದಿಗೆ ನಿಯಮಬಾಹಿರವಾಗಿ ನಡೆದುಕೊಳ್ಳುವ ಮೈಕ್ರೋ ಫೈನಾನ್ಸ್ ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ವಿಧಾನ ಪರಿಷತ್ ನಲ್ಲಿ ಸಾಲ ನೀಡುವ ಸಂಸ್ಥೆಗಳು ಆರ್‌ಬಿಐ ಮಾರ್ಗಸೂಚಿಯ ಅನ್ವಯ ಕ್ರಮ ಕೈಗೊಳ್ಳಬೇಕು. ಇಂತಹ ಕಂಪನಿಗಳಿಂದ ಸಾಲಗಾರರಿಗೆ ತೊಂದರೆಯಾದಲ್ಲಿ ಸಂಬಂಧಿಸಿದ ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಿಸಬಹುದಾಗಿದೆ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read