Jain Muni Murder Case : ಜೈನಮುನಿ ಗುಣಧರನಂದಿ ಭೇಟಿಯಾದ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದೇನು..?

ಜೈನಮುನಿ ಕಾಮಕುಮಾರನಂದಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಣಧರನಂದಿ ಜೈನಮುನಿ ಸರ್ಕಾರದ ವಿರುದ್ಧ ನಿನ್ನೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಬೆನ್ನಲ್ಲೇ ಗೃಹ ಸಚಿವ ಜಿ.ಪರಮೇಶ್ವರ್ ಗುಣಧರನಂದಿ ಜೈನಮುನಿಗಳನ್ನು ಭೇಟಿಯಾಗಿದ್ದಾರೆ.

ಹುಬ್ಬಳ್ಳಿ ತಾಲೂಕು ವರೂರು ಗ್ರಾಮಕ್ಕೆ ಸಚಿವ ಪರಮೇಶ್ವರ್ ಭೇಟಿ ನೀಡಿದ್ದು, ನವಗ್ರಹ ತೀರ್ಥಕ್ಷೇತ್ರ ಜೈನಮುನಿ ಗುಣಧರನಂದಿಶ್ರೀಗಳ ಜೊತೆ ಚರ್ಚೆ ನಡೆಸಿದ್ದಾರೆ. ವರೂರು ಗ್ರಾಮಕ್ಕೆ ಭೇಟಿ ನೀಡಿದ್ದ ಎಡಿಜಿಪಿ ಹಿತೇಂದ್ರ ಜೈನಮುನಿ ಗುಣಧರನಂದಿಶ್ರೀಗಳ ಜೊತೆ ಚರ್ಚೆ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ಗೃಹ ಸಚಿವರು ಸರ್ಕಾರ ಯಾವುದೇ ತಾರತಮ್ಯ ಮಾಡಲ್ಲ, ಎಲ್ಲರಿಗೂ ನ್ಯಾಯ ಒದಗಿಸುತ್ತದೆ, ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read