HomeLatest NewsBREAKING : ಕಾರಾಗೃಹ ಇಲಾಖೆಯಲ್ಲಿ ಖಾಲಿ ಇರುವ 1000 ಸಿಬ್ಬಂದಿಗಳ ನೇಮಕಾತಿಗೆ ಗೃಹ ಸಚಿವ...

BREAKING : ಕಾರಾಗೃಹ ಇಲಾಖೆಯಲ್ಲಿ ಖಾಲಿ ಇರುವ 1000 ಸಿಬ್ಬಂದಿಗಳ ನೇಮಕಾತಿಗೆ ಗೃಹ ಸಚಿವ ಜಿ. ಪರಮೇಶ್ವರ್ ಆದೇಶ.!

ಬೆಂಗಳೂರು : ಕಾರಾಗೃಹ ಇಲಾಖೆಯಲ್ಲಿ ಖಾಲಿ ಇರುವ 1000 ಸಿಬ್ಬಂದಿಗಳ ನೇಮಕಾತಿಗೆ ಗೃಹ ಸಚಿವ ಜಿ. ಪರಮೇಶ್ವರ್ ಸೂಚನೆ ನೀಡಿದ್ದಾರೆ.

ಜೈಲಾಧಿಕಾರಿಗಳು, ಪೊಲೀಸ್ ಅಧಿಕಾರಿಗಳ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿದ ಗೃಹ ಸಚಿವ ಪರಮೇಶ್ವರ್ ಮಾತನಾಡಿದರು.

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ಪ್ರಕರಣದ ತನಿಖೆಗೆ ನಾಲ್ವರು ಅಧಿಕಾರಿಗಳ ಸಮಿತಿ ರಚನೆ ಮಾಡಲಾಗಿದೆ ಎಂದ ಗೃಹ ಸಚಿವ ಪರಮೇಶ್ವವರ್ ‘ ಕಾರಾಗೃಹ ಇಲಾಖೆಯಲ್ಲಿ ಖಾಲಿ ಇರುವ 1000 ಕ್ಕೂ ಹೆಚ್ಚು ಹುದ್ದೆಗಳ ಭರ್ತಿಗೆ ಅವರು ನಿರ್ದೇಶನ ನೀಡಿದ್ದಾರೆ. ಕೆಪಿಎಸ್ ಸಿ ಮೂಲಕ ಅಧಿಕಾರಿಗಳ ನೇಮಕಾತಿಗೆ ಕ್ರಮ ಕೈಗೊಳ್ಳಲಾಗುತ್ತದೆ. ಸಹಾಯಕ ಅಧೀಕ್ಷಕ ಸೇರಿ 1000 ಸಿಬ್ಬಂದಿಗಳ ನೇಮಕಾತಿ ಮಾಡಲಾಗುತ್ತದೆ ಎಂದು ಅವರು ಹೇಳಿದರು. ಹಾಗೂ 5 ವರ್ಷಗಳ ನಂತರ ಜೈಲಾಧಿಕಾರಿಗಳ ವರ್ಗಾವಣೆ ಕಡ್ಡಾಯ ಎಂದು ಅವರು ಹೇಳಿದರು. ಒಂದೇ ಕಡೆ ಕೆಲಸ ಮಾಡುವುದರಿಂದ ಪ್ರಭಾವ ಬೀರುತ್ತದೆ. ಆದ್ದರಿಂದ 5 ವರ್ಷದ ಬಳಿಕ ಅಧಿಕಾರಿಗಳನ್ನ ವರ್ಗಾವಣೆ ಮಾಡಲಾಗುತ್ತದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಾಗೂ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ಪ್ರಕರಣದ ತನಿಖೆಗೆ ನಾಲ್ವರು ಅಧಿಕಾರಿಗಳ ಸಮಿತಿ ರಚನೆ ಮಾಡಲಾಗಿದೆ . ಕಾನೂನು ವ್ಯವಸ್ಥೆ ವಿಭಾಗದ ಎಡಿಜಿಪಿ ಆರ್.ಹಿತೇಂದ್ರ, ಸಂದೀಪ್ ಪಾಟೀಲ್, ಅಮರನಾಥ ರೆಡ್ಡಿ, ರಿಷ್ಯಂತ್ ಅವರನ್ನು ಒಳಗೊಂಡ ನಾಲ್ವರು ಅಧಿಕಾರಿಗಳ ಸಮಿತಿ ರಚಿಸಲಾಗಿದೆ. ತನಿಖೆ ಬಳಿಕ ವರದಿ ನೀಡುವಂತೆ ಸೂಚಿಸಲಾಗಿದೆ ಎಂದರು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular