ಸಂಸದ ಪ್ರತಾಪ್ ಸಿಂಹ ಸೋದರ ವಿಕ್ರಂ ಸಿಂಹ ಅಕ್ರಮವಾಗಿ ಮರ ಕಡಿದಿರುವುದು ನಿಜ : ಗೃಹ ಸಚಿವ ಡಾ.ಜಿ.ಪರಮೇಶ್ವರ್‌

ಬೆಂಗಳೂರು : ಸಂಸದ ಪ್ರತಾಪ್ ಸಿಂಹ ಸೋದರ ವಿಕ್ರಂ ಸಿಂಹ ಅಕ್ರಮವಾಗಿ ಮರ ಕಡಿದಿದ್ದಾರೆ ಆದ್ದರಿಂದ ಅವರ ವಿರುದ್ಧ ಕ್ರಮ ಆಗಿದೆ ಎಂದು ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್​ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಸದ ಪ್ರತಾಪ್‌ ಸಿಂಹ ಸಹೋದರ ವಿಕ್ರಂ ಸಿಂಹ ತಪ್ಪು ಮಾಡಿರುವುದು ನಿಜ, ಹೀಗಾಗಿ ಅರಣ್ಯ ಇಲಾಖೆ ಕ್ರಮ ಕೈಗೊಂಡಿದೆ.  ಈ ಪ್ರಕರಣದಲ್ಲಿ ಸಿಎಂ ಹೆಸರು ತರುವುದು ಬೇಡ. ಪ್ರಕರಣದಲ್ಲಿ ಅನವಶ್ಯಕವಾಗಿ ರಾಜಕೀಯ ಬಣ್ಣ ಕೊಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ವೇಳೆ ಯಾವುದೇ ಅಹಿತಕರ ಘಟನೆ ಆಗಬಾರದು. ವಾರದ ಹಿಂದೆಯೇ ಪೊಲೀಸ್ ಅಧಿಕಾರಿಗಳ ಜೊತೆ ಚರ್ಚೆ ಆಗಿದೆ. ಎಂ.ಜಿ.ರೋಡ್, ಬ್ರಿಗೇಡ್ ರೋಡ್​ನಲ್ಲಿ ವಿಶೇಷ ಗಮನ ಕೊಡುವಂತೆ ಸೂಚನೆ ನೀಡಿದ್ದೇನೆ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read