ಅಂಕೋಲಾ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದಲ್ಲಿ ಬುಧವಾರ ಮಧ್ಯಾಹ್ನವೇ ಭೀಕರ ಹತ್ಯೆ ಯತ್ನವೊಂದು ನಡೆದಿದ್ದು, ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರ ಆಪ್ತ ಹಾಗೂ ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ನಾಯಕ್ ಅವರು ಕೂದಲೆಳೆ ಅಂತರದಲ್ಲಿ ಸಾವಿನಿಂದ ಪಾರಾಗಿದ್ದಾರೆ.
ಗೃಹ ಸಚಿವ ಡಾ. ಜಿ. ಪರಮೇಶ್ವರ ಆಪ್ತ, ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ನಾಯಕ್ ಅವರ ಮೇಲೆ ದುಷ್ಕರ್ಮಿಗಳು ಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಕನ್ನಡದ ಅಂಕೋಲಾದಲ್ಲಿ ನಡೆದಿದೆ.
ಪಟ್ಟಣದ ಕಣಕಣೇಶ್ವರ ದೇವಸ್ಥಾನದ ಬಳಿ ಗೋಪಾಲಕೃಷ್ಣ ನಾಯಕ್ ಕಾರಿನಿಂದ ಇಳಿದು ಕ್ಷೌರಕ್ಕಾಗಿ ಅಂಗಡಿಗೆ ತೆರಳುತ್ತಿದ್ದರು. ಈ ವೇಳೆ ಹಿಂಬಾಲಿಸಿ ಬಂದ 6 ಮಂದಿ ದುಷ್ಕರ್ಮಿಗಳ ಗುಂಪು ಏಕಾಏಕಿ ಚಾಕುವಿನಿಂದ ಇರಿದಿದ್ದಾರೆ. ಆಗ ಗೋಪಾಲಕೃಷ್ಣ ತಕ್ಷಣವೇ ಸಮೀಪದಲ್ಲಿದ್ದ ಬ್ಯಾಂಕ್ ಒಳಗೆ ಓಡಿಹೋಗಿ, ಒಳಗಿನಿಂದ ಬಾಗಿಲು ಹಾಕಿಕೊಂಡು ಪ್ರಾಣಾಪಾಯದಿಂದ ಪಾರಾಗಿದ್ದಾರೆ. 6 ಮಂದಿ ದುಷ್ಕರ್ಮಿಗಳ ಗುಂಪು ಮಾರಕಾಸ್ತ್ರಗಳೊಂದಿಗೆ ಹಿಂಬಾಲಿಸಿ ಏಕಾಏಕಿ ಚಾಕು ಇರಿತ ನಡೆಸಿದೆ.
ಚಾಕು ಇರಿತದಿಂದ ಗಾಯಗೊಂಡ ತಕ್ಷಣ ಗೋಪಾಲಕೃಷ್ಣ ಅವರು ಸಮೀಪದ ಬ್ಯಾಂಕ್‌ಗೆ ಓಡಿಹೋಗಿ, ಒಳಗಿನಿಂದ ಬಾಗಿಲು ಹಾಕಿಕೊಂಡಿದ್ದರಿಂದ ಸುಪಾರಿ ಹಂತಕರ ಪ್ಲಾನ್ ಉಲ್ಟಾ ಹೊಡೆದಿದೆ. ಗಾಯಗೊಂಡ ಅವರಿಗೆ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಣಕಣೇಶ್ವರ ದೇವಸ್ಥಾನದ ಸಮೀಪ ಕ್ಷೌರದ ಅಂಗಡಿಗೆ ತೆರಳುತ್ತಿದ್ದಾಗ ಈ ದಾಳಿ ನಡೆದಿದ್ದು, ಹಾಡಹಗಲೇ ನಡೆದ ಈ ಘಟನೆಯಿಂದ ಸಾರ್ವಜನಿಕರಲ್ಲಿ ಭಾರೀ ಆತಂಕ ಮೂಡಿಸಿದೆ..

