
ಸುದ್ದಿಗಾರರ ಜೊತೆ ಮಾತನಾಡಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸೋಮಶೇಖರ್ ಅವರನ್ನು ನಾನು ಸಂಪರ್ಕ ಮಾಡಿಲ್ಲ. ಆದರೆ ಅವರು ಕಾಂಗ್ರೆಸ್ಗೆ ದುಡಿದವರು. ನಾನು ಕಾಂಗ್ರೆಸ್ ಅಧ್ಯಕ್ಷ ಆಗಿದ್ದಾಗ ಅವರನ್ನು ಜಿಲ್ಲಾ ಅಧ್ಯಕ್ಷರನ್ನಾಗಿ ಮಾಡಿದ್ದೆ. ಆಗ ಒಳ್ಳೆಯ ಕೆಲಸ ಮಾಡಿದ್ದರು. ಅವರು ಪಕ್ಷಕ್ಕೆ ಬಂದರೆ ಸ್ವಾಗತ ಎಂದು ಹೇಳಿದ್ದಾರೆ. ಈ ಮೂಲಕ ಬಿಜೆಪಿ ಶಾಸಕ ಸೋಮಶೇಖರ್ ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ಪರೋಕ್ಷ ಸುಳಿವು ಕೊಟ್ಟಿದ್ದಾರೆ.
ನಮ್ಮ ಸಿದ್ದಾಂತದ ಮೇಲೆ, ಪಕ್ಷದ ನಾಯಕತ್ವದ ಮೇಲೆ ವಿಶ್ವಾಸ ಇಟ್ಟು ಬರುತ್ತಾರೆ. ಆಗ ಒಳ್ಳೆಯ ಕೆಲಸ ಮಾಡಿದರೆ ಅವರಿಗೆ ಅವಕಾಶ ಸಿಗುತ್ತದೆ. ಪಕ್ಷ ಬಿಟ್ಟು ಬರುವವರಿಗೆ ಸ್ಥಾನಮಾನ ನೀಡಲು ರಾಜಕೀಯದಲ್ಲಿ ಸಾಧ್ಯವಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.

