ಬೆಂಗಳೂರು: ಹೊರ ರಾಜ್ಯದಿಂದ ಬಂದವರಿಂದಲೇ ಹೆಚ್ಚು ಅಪರಾಧ ಕೃತ್ಯಗಳು ನಡೆಯುತ್ತಿವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಬಾಲಕಿ ಮೇಲೆ ಅತ್ಯಾಚಾರ, ಕೊಲೆ ಆರೋಪಿ ಎನ್ ಕೌಂಟರ್ ಗೆ ಬಲಿ ಪ್ರಕರಣಗಳ ಬಗ್ಗೆ ಪ್ರತಿಕ್ರಿಯಿಸಿದ ಗೃಹ ಸಚಿವ ಪರಮೇಶ್ವರ್, ಬಿಹಾರ ಮೂಲದ ರಿತೇಶ್ ಎಂಬಾತ ಬಾಲಕಿಯನ್ನು ಹತ್ಯೆ ಮಾಡಿ ಬಳಿಕ ಪೊಲೀಸ್ ಗುಂಡೇಟಿಗೆ ಬಲಿಯಾಗಿದ್ದಾನೆ. ಹೊರ ರಾಜ್ಯದಿಂದ ಬಂದವರಿಂದಲೇ ಕರ್ನಾಟಕದಲ್ಲಿ ಹೆಚ್ಚು ಅಪರಾಧ ಕೃತ್ಯಗಳು ನಡೆಯುತ್ತಿವೆ. ಹೊರ ರಾಜ್ಯದಿಂದ ಇಲ್ಲಿಗೆ ಬಂದವರಿಗೆ ಇಲ್ಲಿನ ಸಂಸ್ಕೃತಿ ತಿಳಿದುಕೊಳ್ಳಲ್ಲ, ಇಲ್ಲಿನ ಜನರ ಭಾವನೆ ಅರ್ಥ ಮಾಡಿಕೊಳ್ಳದೇ ಈ ರೀತಿ ವರ್ತಿಸುತ್ತಾರೆ ಎಂದರು.
ಹೆಚ್ಚಿನವು ಕಟ್ಟಡ ಕಾರ್ಮಿಕರಿಂದಲೇ ಅಪರಾಧ ಕೃತ್ಯಗಳು ನಡೆಯುತ್ತಿವೆ. ಅಪರಾಧ ಕೃತ್ಯಗಳಿಗೆ ಕಡಿವಾಣ ಹಾಕಲು ಸಭೆ ನಡೆಸುತ್ತೇವೆ. ಕಾರ್ಮಿಕ ಇಲಾಖೆ ಜೊತೆ ಜಂಟಿಯಾಗಿ ಸಭೆ ನಡೆಸಲಾಗುವುದು ಎಂದು ತಿಳಿಸಿದರು.