ಕಾರವಾರ: ಹೋಂ ಸ್ಟೇನಲ್ಲಿ ಗ್ಯಾಂಬ್ಲಿಂಗ್ ನಡೆಸುತ್ತಿದ್ದ ಬೃಹತ್ ಜಾಲವನ್ನು ಉತ್ತರ ಕನ್ನಡ ಜಿಲ್ಲೆಯ ಶಿರಸಿ ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಹೋಂ ಸ್ಟೇ ನಲ್ಲಿ ಜೂಜಾಟ ನಡೆಸುತ್ತಿದ ವೇಳೆ ಖಚಿತ ಮಾಹಿತಿ ಮೇರೆಗೆ ದಿಢೀರ್ ದಾಳಿ ನಡೆಸಿದ ಪೊಲೀಸರು ಬರೋಬ್ಬರಿ 49.50 ಲಕ್ಷ ನಗದು ಹಣ ವಶಪಡಿಸಿಕೊಂಡಿದ್ದಾರೆ.
ಪ್ರಕರಣದಲ್ಲಿ 19 ಜನರನ್ನು ಬಂಧಿಸಿದ್ದಾರೆ. ಭೈರುಂಬೆ ವ್ಯಾಪ್ತಿಯ ಅಗಸಾಲ ಗ್ರಾಮದ ವಿ.ಆರ್.ಆರ್.ಹೋಮ್ ಸ್ಟೇನಲ್ಲಿ ಜೂಜಾಟ ನಡೆಸುತ್ತಿದ್ದ ವೇಳೆ ಈ ದಾಳಿ ನಡೆದಿದೆ.
ಬಂಧಿತರು ಶಿವಮೊಗ್ಗ, ದಾವಣಗೆರೆ, ಹಾವೇರಿ ಜಿಲ್ಲೆಯವರಾಗಿದ್ದಾರೆ. ಡಿಸಿಪಿ ಗೀತಾ ಪಾಟೀಲ್ ನೇತೃತ್ವದಲ್ಲಿ ಈ ದಾಳಿ ನಡೆದಿದೆ.