ಎಲೆಕ್ಟ್ರಿಕ್ ದ್ವಿಚಕ್ರ ವಾಹನ ತಯಾರಿಕಾ ಘಟಕ ಆರಂಭಿಸಲು ಹೋಂಡಾದಿಂದ 600 ಕೋಟಿ ರೂ. ಹೂಡಿಕೆ

ಬೆಂಗಳೂರು: ಕೋಲಾರದ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ತಯಾರಿಕಾ ಘಟಕ ಆರಂಭಿಸಲು ಜಪಾನ್ ಮೂಲದ ಹೋಂಡಾ ಕಂಪನಿ 600 ಕೋಟಿ ರೂಪಾಯಿ ಹೂಡಿಕೆ ಮಾಡಲಿದೆ ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ.

ನಮ್ಮ ಜಪಾನ್ ಪ್ರವಾಸದ ವೇಳೆ ವಿಶ್ವ ವಿಖ್ಯಾತ ಮೋಟಾರ್ ಕಂಪೆನಿಯಾದ ಹೋಂಡಾದ ನಿರ್ದೇಶಕ ಮತ್ತು ಕಾರ್ಯನಿರ್ವಾಹಕ ಉಪಾಧ್ಯಕ್ಷ ನೋರಿಯಾ ಕೈಹಾರಾ ಅವರನ್ನು ಭೇಟಿಯಾಗಿ ಕರ್ನಾಟಕದಲ್ಲಿ ಹೋಂಡಾದ ಉತ್ಪಾದನಾ ವ್ಯಾಪ್ತಿಯನ್ನು ವಿಸ್ತರಿಸುವುದರ ಕುರಿತು ಮಾತುಕತೆ ನಡೆಸಿದೆವು.

ಕರ್ನಾಟಕದ ನರಸಾಪುರ ಟೂ-ವೀಲರ್ ಕಾರ್ಖಾನೆ ಭಾರತದಲ್ಲಿನ ಅವರ ಅತಿದೊಡ್ಡ ಸ್ಥಾವರವಾಗಿದೆ. ಇಲ್ಲಿ ವಾರ್ಷಿಕವಾಗಿ 2.4 ದಶಲಕ್ಷ ವಾಹನಗಳನ್ನು ಉತ್ಪಾದಿಸಲಾಗುತ್ತಿದೆ.

ಜಾಗತಿಕ ಹೂಡಿಕೆದಾರರ ಸಮಾವೇಶದ ವೇಳೆ ಮಾಡಿಕೊಂಡ ಒಪ್ಪಂದದ(MOU) ಅಡಿಯಲ್ಲಿ ₹600 ಕೋಟಿ ಹೂಡಿಕೆಯೊಂದಿಗೆ ಭಾರತದ ಮೊದಲ ಇಲೆಕ್ಟ್ರಿಕ್ ಟೂ-ವೀಲರ್ ಉತ್ಪಾದನಾ ತಾಣವನ್ನು ಕರ್ನಾಟಕದಲ್ಲಿ ಸ್ಥಾಪಿಸಲಿದೆ ಎಂದು ಮಾಹಿತಿ ನೀಡಿದ್ದಾರೆ.

ದ್ವಿಚಕ್ರ ವಾಹನಗಳ ಕ್ಷೇತ್ರದಾಚೆಗೆ  ಹೆಚ್ಚಿನ ಹೂಡಿಕೆಗಳನ್ನು ಪರಿಶೀಲಿಸಲು ಪ್ರೋತ್ಸಾಹಿಸಿದೆವು. ಹೋಂಡಾದ ಕಾರ್ಯಾಚರಣೆ ಮತ್ತು ಭವಿಷ್ಯದ ವಿಸ್ತರಣೆಗಳನ್ನು ಸುಗಮಗೊಳಿಸಲು ಕರ್ನಾಟಕ ಸರ್ಕಾರದ ಸಂಪೂರ್ಣ ಬೆಂಬಲ ನೀಡುವುದಾಗಿ ಭರವಸೆ ವ್ಯಕ್ತಪಡಿಸಿದೆ. ಕರ್ನಾಟಕವನ್ನು ಇಲೆಕ್ಟ್ರಿಕ್ ವಾಹನಗಳು (EV) ಮತ್ತು ಅತ್ಯಾಧುನಿಕ ಸಂಚಾರ ತಂತ್ರಜ್ಞಾನದ ಜಾಗತಿಕ ಕೇಂದ್ರವಾಗಿ ರೂಪಿಸುತ್ತಿದ್ದೇವೆ ಎಂದು ಎಂ.ಬಿ. ಪಾಟೀಲ್ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read