HomeKarnatakaBIG NEWS: ಹೆಜ್ಜೇನು ದಾಳಿ: ಮೂವರು ವಿದ್ಯಾರ್ಥಿಗಳ ಸ್ಥಿತಿ ಗಂಭೀರ

BIG NEWS: ಹೆಜ್ಜೇನು ದಾಳಿ: ಮೂವರು ವಿದ್ಯಾರ್ಥಿಗಳ ಸ್ಥಿತಿ ಗಂಭೀರ

ಮಂಗಳೂರು: ಶಾಲೆಯಲ್ಲಿ ಪ್ರಾರ್ಥನೆ ಮಾಡುತ್ತಿದ್ದ ಮಕ್ಕಳ ಮೇಲೆ ಹೆಜ್ಜೇನು ದಾಳಿ ನಡೆಸಿದ್ದು, 15 ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಕ್ಕಿಂಜೆ ಗ್ರಾಮದಲ್ಲಿ ನಡೆದಿದೆ.

ವಿದ್ಯಾರ್ಥಿಗಳು ಪ್ರಾರ್ಥನೆ ಮುಗಿಸಿ ಶಾಲೆಯ ಒಳಗೆ ತೆರಳುತ್ತಿದ್ದರು. ಈ ವೇಳೆ ಏಕಾಏಕಿ ಹೆಜ್ಜೇನುಗಳು ದಾಳಿ ನಡೆಸಿವೆ. 15 ವಿದ್ಯಾರ್ಥಿಗಳು ಗಾಯಗೊಂಡಿದ್ದು, ಅವರಲ್ಲಿ ಮೂವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳು ವಿದ್ಯಾರ್ಥಿಗಳನ್ನು ಕಕ್ಕಿಂಜೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಬಳಿಕ ಶಾಲೆಗೆ ರಜೆ ಘೋಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular