BREAKING NEWS: ಶಿಕ್ಷಕರು, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ: ದಿಕ್ಕಾಪಾಲಾಗಿ ಓಡಿದ ಜನರು

ಗದಗ: ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಿನ್ನೆಲೆಯಲ್ಲಿ ಮಾನವಸರಪಳಿ ರಚನೆ ಮಾಡಿದ್ದ ವೇಳೆ ಶಿಕ್ಷಕಿಯರು ಹಾಗೂ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ ನಡೆಸಿರುವ ಘಟನೆ ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಬಾಲೆಹೊಸೂರಿನಲ್ಲಿ ನಡೆದಿದೆ.

ಇಬ್ಬರು ಶಿಕ್ಷಕಿಯರ ಮುಖ, ತಲೆ, ಕೈಗೆ ಹೆಜ್ಜೇನು ದಾಳಿ ನಡೆಸಿ ಕಚ್ಚಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ. ಭಯಗೊಂಡ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಸ್ಥಳದಿಂದ ದಿಕ್ಕಾಪಾಲಾಗಿ ಓಡಿದ್ದಾರೆ.

ಶಿಗ್ಲಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕಿಯರ ಮೇಲೆ ಹೆಜ್ಜೆನು ದಾಳಿ ನಡೆದಿದೆ. ಸರಸ್ವತಿ ಗುಡಿಸಾಗರ ಹಾಗೂ ಸುರೀಜಾ ದಿಂಡೂರು ಎಂಬ ಶಿಕ್ಷಕಿಯರು ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣ ಶಾಸಕ ಡಾ.ಚಂದ್ರು ಲಮಾಣಿ ತಮ್ಮದೇ ವಾಹನದಲ್ಲಿ ಶಿಕ್ಷಕಯರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿ ಮಾನವೀಯತೆ ಮೆರೆದಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read