ಅರಣ್ಯ ಇಲಾಖೆ ಅಧಿಕಾರಿಗೆ ಹನಿ ಟ್ರ್ಯಾಪ್: ಮಹಿಳೆ ಸೇರಿ ಮೂವರು ಅರೆಸ್ಟ್

ಶಿವಮೊಗ್ಗ: ಅರಣ್ಯ ಇಲಾಖೆ ಅಧಿಕಾರಿಗೆ ಹನಿಟ್ರ್ಯಾಪ್ ಮಾಡಿ ಹಣ ವಸೂಲಿ ಮಾಡಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಅನನ್ಯಾ, ಮೋಹಿತ್ ಗೌಡ, ಸಿದ್ದಿಕ್ ಬಂಧಿತ ಆರೋಪಿಗಳು. ಉಳಿದ ನಾಲ್ವರು ಆರೋಪಿಗಳು ಪರಾರಿಯಾಗಿದ್ದು, ಅವರ ಬಂಧನಕ್ಕೆ ಬಲೆ ಬೀಸಲಾಗಿದೆ. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯಲ್ಲಿ ಅರಣ್ಯ ಇಲಾಖೆಯ ಡಿ.ಆರ್.ಎಫ್.ಒ.ಗೆ ಹನಿಟ್ರ್ಯಾಪ್ ಮಾಡಲಾಗಿದೆ.

ಹಿಂದೆ ಅಧಿಕಾರಿಗೆ ಕರೆ ಮಾಡಿದ್ದ ಮಹಿಳೆ ನೀವು ನಮ್ಮ ಸ್ಟುಡಿಯೋದಲ್ಲಿ ಫೋಟೋ ತೆಗೆಸಿಕೊಂಡಿದ್ದೀರಿ. ಅದನ್ನು ತೆಗೆದುಕೊಂಡು ಹೋಗಿ ಎಂದು ಹೇಳಿದ್ದಾಳೆ. ನಂತರ ಅಧಿಕಾರಿ ಹಾಗೂ ಮಹಿಳೆಯ ನಡುವೆ ಸಲುಗೆ ಬೆಳೆದಿದ್ದು, ಒಂದು ದಿನ ಅಧಿಕಾರಿ ಮನೆಯಲ್ಲಿದ್ದ ವೇಳೆ ಗ್ಯಾಂಗ್ ಮನೆಗೆ ಬಂದು ಬೆತ್ತಲೆ ಫೋಟೋ ತೆಗೆದು ಹಣಕ್ಕೆ ಬೇಡಿಕೆ ಇಟ್ಟಿದೆ.

ಅಲ್ಲದೇ ಹಂತ ಹಂತವಾಗಿ ಅಧಿಕಾರಿಯಿಂದ ಹಣ ಪಡೆದುಕೊಂಡಿದ್ದಾರೆ. ಹಣ ಕೊಟ್ಟು ಕೊಟ್ಟು ಸಾಕಾದ ಅಧಿಕಾರಿ ತೀರ್ಥಹಳ್ಳಿ ಠಾಣೆ ಪೋಲಿಸರಿಗೆ ದೂರು ನೀಡಿದ್ದು,7 ಜನರ ವಿರುದ್ಧ ದೂರು ದಾಖಲಾಗಿದೆ. ಇವರಲ್ಲಿ ಮೂವರನ್ನು ಬಂಧಿಸಲಾಗಿದ್ದು, ಉಳಿದವರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read