ಹಾಸನ: ಹೆಜ್ಜೇನು ದಾಲಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಸಾವನ್ನಪ್ಪಿದ್ದು, ಆತನ ತಂದೆಯ ಸ್ಥಿತಿ ಗಂಭೀರವಾಗಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಬಾಣನಕೆರೆ ಗ್ರಾಮದಲ್ಲಿ ನಡೆದಿದೆ.
ಬಿ.ಕೆ.ಚರಣ್ (30) ಮೃತ ದುರ್ದೈವಿ. ತಂದೆ ಕುಮಾರ್ ಸ್ಥಿತಿ ಗಂಭೀರವಾಗಿದೆ. ಮೊನ್ನೆ ತಂದೆಯ ಜೊತೆ ಚರಣ್, ಜಮೀನಿಗೆ ಹೋಗಿದ್ದರು. ಈ ವೇಳೆ ಹೆಜ್ಜೇನು ದಾಳಿ ನಡೆಸಿತ್ತು. ತಂದೆ-ಮಗ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದರು.
ಇಬ್ಬರನ್ನೂ ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಮಗ ಚರಣ್ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ನುಗ್ಗೇನಹಳ್ಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.