HomeLatest NewsBREAKING: ಹನಿಟ್ರ್ಯಾಪ್ ಮಾಡಿ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳು ಅರೆಸ್ಟ್

BREAKING: ಹನಿಟ್ರ್ಯಾಪ್ ಮಾಡಿ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳು ಅರೆಸ್ಟ್

ಮೈಸೂರು: ಹನಿಟ್ರ್ಯಾಪ್ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಬೈಲುಕುಪ್ಪೆ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಬೈಲುಕುಪ್ಪೆ ಠಾಣೆ ಪೊಲೀಸರು ಕೇರಳದ ಕಣ್ಣೂರು ಲಾಡ್ಜ್ ನಲ್ಲಿ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಕವನಾ ಹಾಗೂ ಸೈಫ್ ಬಂಧಿತ ಆರೋಪಿಗಳು.

ಕಂಪಲಾಪುರದ ಬಟ್ಟೆ ಅಂಗಡಿ ಮಾಲಿಕ ದಿನೇಶ್ ಗೆ ಹನಿಟ್ರ್ಯಾಪ್ ಮಾಡಿದ್ದ ಗ್ಯಾಂಗ್, 10 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದರು. ಹುಣಸೂರು ಪೊಲೀಸ್ ಕಾನ್ಸ್ ಟೇಬಲ್ ಶಿವಣ್ಣ ಕೂಡ ಈ ಜಾಲದಲ್ಲಿ ಭಾಗಿಯಾಗಿದ್ದ. ಈಗಾಗಲೇ ಪ್ರಕರಣ ಸಂಬಂಧ ಶಿವಣ್ಣ, ಆನಂದ್ ಹಾಗೂ ಮೂರ್ತಿ ಎಂಬುವವರನ್ನು ಪೊಲೀಸರು ಬಂಧಿಸಿದ್ದರು. ಆದರೆ ಇಬ್ಬರು ಆರೋಪಿಗಳು ಎಸ್ಕೇಪ್ ಆಗಿದ್ದರು. ಇದೀಗ ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular