HomeKarnatakaಫೇಸ್ ಬುಕ್, ಇನ್ ಸ್ಟಾ ಮೂಲಕ ಶ್ರೀಮಂತ ವ್ಯಕ್ತಿಗಳಿಗೆ ಗಾಳ: ಹನಿಟ್ರ್ಯಾಪ್ ಖೆಡ್ಡಾಗೆ ಕೆಡವಿ ಬ್ಲ್ಯಾಕ್...

ಫೇಸ್ ಬುಕ್, ಇನ್ ಸ್ಟಾ ಮೂಲಕ ಶ್ರೀಮಂತ ವ್ಯಕ್ತಿಗಳಿಗೆ ಗಾಳ: ಹನಿಟ್ರ್ಯಾಪ್ ಖೆಡ್ಡಾಗೆ ಕೆಡವಿ ಬ್ಲ್ಯಾಕ್ ಮೇಲ್: ಫ್ಯಾಶನ್ ಡಿಸೈನರ್ ಅರೆಸ್ಟ್

ಬೆಳಗಾವಿ: ಸಾಮಾಜಿಕ ಜಾಲತಾಣಗಳ ಮೂಲಕ ಶ್ರೀಮಂತ ವ್ಯಕ್ತಿಗಳನ್ನು ಪರಿಚಯಿಸಿಕೊಂಡು ಸಲುಗೆ ಬೆಳೆಸಿ ಹನಿಟ್ರ್ಯಾಪ್ ಖೆಡ್ಡಾಗೆ ಕೆಡವಿ ಬ್ಲ್ಯಾಕ್ ಮೇಲ್ ಮಾಡಿ ಹಣ, ದುಬಾರಿ ವಸ್ತುಗಳಿಗೆ ಬೇಡಿಕೆ ಇಡುತ್ತಿದ್ದ ಖತರ್ನಾಕ್ ಫ್ಯಾಶನ್ ಡಿಸೈನರ್ ಮಹಿಳೆಯನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಮೂಲದ ದೀಪಾ ಅವಟಗಿ (33) ಬಂಧಿತ ಆರೋಪಿ. ಆಕೆಯ ಸ್ನೇಹಿತ ಶಿವಾನಂದ ಮಠಪತಿ ಎಸ್ಕೇಪ್ ಆಗಿದ್ದು, ಆತನಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಆರೋಪಿ ಶಿವಾನಂದ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ನಿವಾಸಿ. ಆತ ಶ್ರೀಮಂತ ವ್ಯಕ್ತಿಗಳ ಬಗ್ಗೆ ದೀಪಾಳಿಗೆ ಮಾಹಿತಿ ನೀಡುತ್ತಿದ್ದ. ದೀಪಾ ಫೇಸ್ ಬುಕ್, ಇನ್ಸ್ಟಾಗ್ರಾಂ ಮೂಲಕ ಶ್ರೀಮಂತ ವ್ಯಕ್ತಿಗಳೊಂದಿಗೆ ಪರಿಚಯ ಮಾಡಿಕೊಂಡು ಅವರನ್ನು ತನ್ನ ಬಲೆಗೆ ಬೀಳಿಸಿಕೊಳ್ಳುತ್ತಿದ್ದಳು. ಬಳಿಕ ಅಶ್ಲೀಲ ಚಾಟ್, ಫೋ ಸಂಭಾಷಣೆಗಳ ಮೂಲಕ ಲಾಡ್ಜ್ ಗಳಿಗೆ ಕರೆಯುತ್ತಿದ್ದಳು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಳಗಾವಿ ನಗರದ ಲಾಡ್ಜ್‌ಗೆ ಭೇಟಿ ನೀಡುವಂತೆ ಅವರನ್ನು ಆಹ್ವಾನಿಸುತ್ತಿದ್ದಳು. ಲಾಡ್ಜ್‌ಗೆ ಬಂದ ವ್ಯಕ್ತಿಗಳಿಗೆ ಸ್ನಾನ ಮಾಡಿ ಬರಲು ಹೇಳಿ, ಅವರು ಬಾತ್‌ರೂಮ್‌ಗೆ ಹೋದ ತಕ್ಷಣ ಹೊರಗಿನಿಂದ ಬಾಗಿಲು ಹಾಕಿ ಲಾಕ್ ಮಾಡುತ್ತಿದ್ದಳು. ನಂತರ ಅವರ ಬಳಿ ಇದ್ದ ಮೊಬೈಲ್, ಹಣ ಹಾಗೂ ಕಾರಿನ ಕೀಲಿಗಳನ್ನು ತೆಗೆದುಕೊಂಡು ಎಸ್ಕೇಪ್ ಆಗುತ್ತಿದ್ದಳು. ಬಳಿಕ ಬೇರೆ ನಂಬರ್ ಗಳಿಂದ ಕರೆ ಮಾಡಿ ಬ್ಲ್ಯಾಕ್ ಮೇಲ್ ಮಾಡಿ ಹಣಕ್ಕೆ ಬೇಡಿಕೆ ಇಡುತ್ತಿದ್ದಳು.

ದೀಪಾಳ ಹನಿಟ್ರ್ಯಾಪ್ ಖೆಡ್ಡಾಗೆ ಬಿದ್ದ ವ್ಯಕ್ತಿಯೊಬ್ಬನಿಗೆ ಇದೇ ರೀತಿ ವಂಚಸಿದ್ದಳು. ಈ ಘಟನೆಗಳ ಕೆಲವು ದೃಶ್ಯಗಳು ಲಾಡ್ಜ್‌ನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಈ ಕುರಿತು ಬೆಳಗಾವಿಯ ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇನ್ಸೆಕ್ಟ‌ರ್ ಪರಶುರಾಮ ಪೂಜೇರಿ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಆರೋಪಿ ದೀಪಾಳನ್ನು ಬಂಧಿಸಿದ್ದಾರೆ.

ಬಂಧಿತ ದೀಪಾಳಿಂದ ಒಟ್ಟು 32. 86 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಇದರಲ್ಲಿ ಒಂದು ಫಾರ್ಚುನರ್ ಕಾರು, ಒಂದು ಮಾರುತಿ ಸುಜುಕಿ ಎಸ್‌-ಕ್ರಾಸ್ ಕಾರು, 11 ಮೊಬೈಲ್ ಫೋನ್‌ಗಳು, ಒಂದು ಟ್ಯಾಬ್, ಒಂದು ಡೊಂಗಲ್, ಮೂರು ಕಾರಿನ ಕೀಗಳು ಹಾಗೂ 14 ಸಾವಿರ ರೂಪಾಯಿ ನಗದು ಸೇರಿವೆ. ಇನ್ನೋರ್ವ ಆರೋಪಿ ಬಂಧನಕ್ಕೆ ಬಲೆ ಬೀಸಲಾಗಿದ್ದು, ತನಿಖೆ ಮುಂದುವರೆದಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular