ಹುಬ್ಬಳ್ಳಿ: ಹುಬ್ಬಳ್ಳಿ ತಾಲೂಕಿನ ಇನಾಂ ವೀರಾಪುರ ಗ್ರಾಮದಲ್ಲಿ ನಡೆದಿದ್ದ ಮರ್ಯಾದೆಗೇಡು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಇಬ್ಬರು ಪೊಲೀಸ್ ಸಿಬ್ಬಂದಿ ಅಮಾನತು ಮಾಡಲಾಗಿದೆ.
ಠಾಣೆಯ ವಿಶೇಷ ವಿಭಾಗದ ಕಾನ್ಸ್ಟೇಬಲ್ ಸಂಗಮೇಶ್ ಸಾಗರ ಮತ್ತು ಬೀಟ್ ಕಾನ್ಸ್ಟೇಬಲ್ ಚಂದ್ರಕಾಂತ್ ರಾಥೋಡ ಅವರನ್ನು ಅಮಾನತು ಮಾಡಲಾಗಿದೆ. ಘಟನೆಯ ಬಗ್ಗೆ ಮಾಹಿತಿ ನೀಡಿದ ಕಾರಣ ಆಂತರಿಕ ತನಿಖೆ ಕಾಯ್ದಿರಿಸಿ ಅಮಾನತು ಮಾಡಿ ಆದೇಶಿಸಿರುವುದಾಗಿ ಧಾರವಾಡ ಎಸ್‌ಪಿ ಗುಂಜನ್ ಆರ್ಯ ಮಾಹಿತಿ ನೀಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಎಂಟು ಮಂದಿಯನ್ನು ಬಂಧಿಸಿದ್ದಾರೆ.

