HomeLatest Newsಆರ್ಥಿಕ ಇಲಾಖೆ ಅನುಮತಿ ಪಡೆದು ಗೌರವಧನ ಹೆಚ್ಚಳ: ಸಚಿವ ರಹೀಂ ಖಾನ್

ಆರ್ಥಿಕ ಇಲಾಖೆ ಅನುಮತಿ ಪಡೆದು ಗೌರವಧನ ಹೆಚ್ಚಳ: ಸಚಿವ ರಹೀಂ ಖಾನ್

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ, ಉಪಾಧ್ಯಕ್ಷ ಮತ್ತು ಸದಸ್ಯರ ಗೌರವಧನ ಹೆಚ್ಚಿಸುವ ಪ್ರಸ್ತಾವಕ್ಕೆ ಅರ್ಥಿಕ ಇಲಾಖೆ ಅನುಮತಿ ನೀಡಿಲ್ಲ. ಈಗ ಮತ್ತೆ ಪ್ರಸ್ತಾವ ಸಲ್ಲಿಸಿ, ಅನುಮತಿ ಪಡೆದು ಗೌರವಧನವನ್ನು ಶೀಘ್ರವೇ ಹೆಚ್ಚಿಸುತ್ತೇವೆ ಎಂದು ಪೌರಾಡಳಿತ ಸಚಿವ ರಹೀಂ ಖಾನ್‌ ಅವರು ವಿಧಾನ ಮಂಡಲದ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು.

ಕಾಂಗ್ರೆಸ್ ಸದಸ್ಯ ಸುನಿಲ್ ಪಾಟೀಲ್ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಮಹಾನಗರ ಪಾಲಿಕೆಗಳ ಮೇಯರ್, ಉಪಮೇಯರ್, ಸದಸ್ಯರಿಗೆ ನೀಡುತ್ತಿರುವ ಗೌರವಧನ ಹೆಚ್ಚಿಸಲು ಆರ್ಥಿಕ ಇಲಾಖೆ ಅನುಮೋದನೆ ಕೇಳಿದ್ದೇವೆ. ಬೇರೆ ರಾಜ್ಯಗಳಿಗೆ ಹೋಲಿಸಿದರೆ ರಾಜ್ಯದಲ್ಲಿ ಮೇಯರ್ ಮತ್ತು ಉಪಮೇಯರ್ ಗೌರವಧನ ಕಡಿಮೆ ಇದೆ. ಪ್ರಸ್ತುತ ನೀಡುತ್ತಿರುವ ಗೌರವ ಧನವನ್ನು ಪರಿಷ್ಕರಿಸುವ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಆದರೆ ಆರ್ಥಿಕ ಇಲಾಖೆ ಗೌರವಧನ ಪರಿಷ್ಕರಿಸುವ ಪ್ರಸ್ತಾವನೆ ಒಪ್ಪಿಲ್ಲ. ಮತ್ತೊಮ್ಮೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular