HomeKarnatakaBIG UPDATE : ಚಿತ್ರದುರ್ಗದಲ್ಲಿ ಭೀಕರ ಅಪಘಾತ ಪ್ರಕರಣ : ಮೃತರ ಸಂಖ್ಯೆ 5 ಕ್ಕೇರಿಕೆ

BIG UPDATE : ಚಿತ್ರದುರ್ಗದಲ್ಲಿ ಭೀಕರ ಅಪಘಾತ ಪ್ರಕರಣ : ಮೃತರ ಸಂಖ್ಯೆ 5 ಕ್ಕೇರಿಕೆ

ಚಿತ್ರದುರ್ಗ : ಚಿತ್ರದುರ್ಗದ ರಾಷ್ಟ್ರೀಯ ಹೆದ್ದಾರಿ 13 ರ ಮಲ್ಲಾಪುರದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 5 ಕ್ಕೇರಿಯಾಗಿದೆ.

ಖಾಸಗಿ ಬ್ಯಾಂಕ್ ನೌಕರ ಸಂಗನಬಸವ (36), ಪತ್ನಿ ರೇಖಾ(29), ಪುತ್ರ ಅಗಸ್ತ್ಯ(7), ಸಂಬಂಧಿ ಭೀಮಾಶಂಕರ್ (26) ಮೃತಪಟ್ಟಿದ್ದರು. ಇದೀಗ ಚಿಕಿತ್ಸೆ ಫಲಿಸದೇ ಮಧುಸೂಧನ್ ಎಂಬುವವರು ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಭೀಮಾಶಂಕರ್ ಕುಟುಂಬದ ಜೊತೆ ಟ್ರಿಪ್ ಬಂದಿದ್ದ ಮಧುಸೂಧನ್ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಈ ಮೂಲಕ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 5 ಕ್ಕೇರಿಯಾಗಿದೆ. ಮಧುಸೂಧನ್ ಪಿಎಸ್ ಆಗಬೇಕೆಂಬ ಕನಸು ಹೊತ್ತುಕೊಂಡು ಪರೀಕ್ಷಾ ತಯಾರಿಯಲ್ಲಿದ್ದರು. ಆದರೆ ಟ್ರಿಪ್ ಗೆ ಬಂದ ಮಧುಸೂಧನ್ ವಿಧಿಯಾಟಕ್ಕೆ ಬಲಿಯಾಗಿದ್ದಾರೆ.

ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾದ ಪರಿಣಾಮ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ ಚಿತ್ರದುರ್ಗದ ರಾಷ್ಟ್ರೀಯ ಹೆದ್ದಾರಿ 13 ರ ಮಲ್ಲಾಪುರ ಗ್ರಾಮದಲ್ಲಿ ನಡೆದಿದೆ.ವೇಗವಾಗಿ ಬಂದ ಕಾರು ಹಿಂದುಗಡೆಯಿಂದ ಲಾರಿಗೆ ಡಿಕ್ಕಿ ಹೊಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಏಳು ಜನರು ಕಾರಿನಲ್ಲಿ ಚಿಕ್ಕಮಗಳೂರಿಗೆ ಪ್ರವಾಸಕ್ಕೆ ತೆರಳುತ್ತಿದ್ದರು. ನಸುಕಿನ ಜಾವ 3:30ಕ್ಕೆ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿದೆ. ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular