
ಪರಿಣಾಮ ಕಾರಿನಲ್ಲಿದ್ದ ಸಂತೋಷ್ ಸ್ಥಳದಲ್ಲೇ ಮೃತಪಟ್ಟಿದ್ದು, ಕಾರು ನಜ್ಜು ಗುಜ್ಜಾಗಿದೆ. ಮೃತಪಟ್ಟ ಸಂತೋಷ್ ಖಾಸಗಿ ಕಂಪನಿಯೊಂದರಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದರು. ಕಾಮಾಕ್ಷಿ ಪಾಳ್ಯ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

