
ಬೈಕ್ ಗೆ ಲಾರಿ ಡಿಕ್ಕಿಯಾಗಿ ಸ್ಥಳದಲ್ಲೇ ಐವರು ಮೃತಪಟ್ಟ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಹಳ್ಳೋಳಿ ಕ್ರಾಸ್ ಬಳಿ ನಡೆದಿದೆ.
ಒಂದೇ ಬೈಕ್ ನಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಐವರು ಬೈಕ್ ನಲ್ಲಿ ತೆರಳುತ್ತಿದ್ದರು. ಈ ವೇಳೆ ಎದುರಿನಿಂದ ಬಂದ ಲಾರಿ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಮೃತಪಟ್ಟವರ ಗುರುತು ಪತ್ತೆಯಾಗಿಲ್ಲ.ಘಟನೆ ನಡೆದ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

