
ಬೈಕ್ ನಲ್ಲಿ ವೇಗವಾಗಿ ಬಂದ ಸವಾರರು ನಿಯಂತ್ರಣ ತಪ್ಪಿ ಲೈಟ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದಾರೆ. ಮೃತರನ್ನು ಉದಯ (25) ಚಂದನ್ (26) ಎಂದು ಗುರುತಿಸಲಾಗಿದೆ. ಕುಶಾಲನಗರದಿಂದ ಸುಂಟಿಕೊಪ್ಪಕ್ಕೆ ಬರುವಾಗ ಈ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

