HomeLatest NewsBREAKING : ಬೆಂಗಳೂರಲ್ಲಿ ಭೀಕರ ಅಪಘಾತ : ಶಾಲಾ ಬಸ್ ಹರಿದು ಇಬ್ಬರು ಪುಟ್ಟ ಮಕ್ಕಳ...

BREAKING : ಬೆಂಗಳೂರಲ್ಲಿ ಭೀಕರ ಅಪಘಾತ : ಶಾಲಾ ಬಸ್ ಹರಿದು ಇಬ್ಬರು ಪುಟ್ಟ ಮಕ್ಕಳ ದಾರುಣ ಸಾವು !

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಶಾಲಾ ಬಸ್‌ ಒಂದು ಬೈಕ್‌’ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿರುವ ಅತ್ಯಂತ ದಾರುಣ ಘಟನೆ ಇಂದು ನಡೆದಿದೆ. ಹೆಣ್ಣೂರು ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯ ಥಣಿಸಂದ್ರದ ಪೊಲೀಸ್ ಕ್ವಾರ್ಟರ್ಸ್ ಬಳಿಯೇ ಈ ಅವಘಡ ಸಂಭವಿಸಿದೆ.

ಮೃತ ಮಕ್ಕಳನ್ನು ವರ್ಷಾ (2 ವರ್ಷ) ಮತ್ತು ಭಾನು (4 ವರ್ಷ) ಎಂದು ಗುರುತಿಸಲಾಗಿದೆ. ವರ್ಷಾ ಪೊಲೀಸ್ ಕಾನ್ಸ್ಟೇಬಲ್ ನಾಗನಗೌಡ ಅವರ ಪುತ್ರಿಯಾಗಿದ್ದು, ಭಾನು ಇವರ ಅಣ್ಣನ ಮಗಳಾಗಿದ್ದಾರೆ.

ಕಾನ್ಸ್ಟೇಬಲ್ ನಾಗನಗೌಡ ಅವರು ಮಕ್ಕಳನ್ನು ಬೈಕ್ ‘ನಲ್ಲಿ ಕೂರಿಸಿಕೊಂಡು ಹೋಗುತ್ತಿದ್ದಾಗ, ‘ಅಜ್ ಮೋನಿ’ ಶಾಲೆಗೆ ಸೇರಿದ ಬಸ್ ಯು-ಟರ್ನ್ ತೆಗೆದುಕೊಳ್ಳುವಾಗ ಅಜಾಗರೂಕತೆಯಿಂದ ಬೈಕ್’ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಮಕ್ಕಳಿಬ್ಬರು ಬೈಕ್’ ನಿಂದ ಕೆಳಗೆ ಬಿದ್ದಿದ್ದಾರೆ. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಬಸ್ ಮಕ್ಕಳ ಮೇಲೆ ಹರಿದಿದೆ. ತೀವ್ರವಾಗಿ ಗಾಯಗೊಂಡ ಇಬ್ಬರು ಮಕ್ಕಳು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದುರಂತದ ಸುದ್ದಿ ತಿಳಿಯುತ್ತಿದ್ದಂತೆಯೇ ಉತ್ತರ ವಿಭಾಗದ ಸಂಚಾರ ಡಿಸಿಪಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸ್ ವಸತಿ ಸಮುಚ್ಚಯದ ಆವರಣದ ಸನಿಹದಲ್ಲೇ ಈ ಘಟನೆ ನಡೆದಿರುವುದು ಪೊಲೀಸ್ ಕುಟುಂಬಗಳಲ್ಲಿ ಮೌನ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ. ಹೆಣ್ಣೂರು ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಶಾಲಾ ಬಸ್ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ. ಪುಟ್ಟ ಕಂದಮ್ಮಗಳನ್ನು ಕಳೆದುಕೊಂಡ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ.

.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular