ಬೆಂಗಳೂರು : ಬೆಂಗಳೂರಿನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಕ್ಯಾಂಟರ್ ಹರಿದು ಇಬ್ಬರು ಯುವತಿಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಶಿವನಾಪುರ ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದೆ.
ಕ್ಯಾಂಟರ್ ಚಕ್ರಕ್ಕೆ ಸಿಲುಕಿ ಶೈಲಾ (22) ಶ್ವೇತಾ (22) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರು ಹೊಸಕೋಟೆ ತಾಲೂಕಿನ ಅತಿವಟ್ಟ ಗ್ರಾಮದ ನಿವಾಸಿಗಳು ಎಂದು ಗುರುತಿಸಲಾಗಿದೆ.
ರಸ್ತೆ ಕಾಮಗಾರಿ ನಡೆಯುತ್ತಿದ್ದ ಹಿನ್ನೆಲೆ ಜಲ್ಲಿಕಲ್ಲು ಹಾಕಲಾಗಿತ್ತು. ಜಲ್ಲಿಕಲ್ಲು ಇದ್ದಿದ್ದರಿಂದ ಬೈಕ್ ಸ್ಕಿಡ್ ಆಗಿ ರಸ್ತೆ ಮೇಲೆ ಬಿದ್ದಿದೆ. ಕೆಳಗೆ ಬಿದ್ದ ಯುವತಿಯರ ಮೇಲೆ ಟಿಪ್ಪರ್ ಹರಿದಿದೆ. ಹೊಸಕೋಟೆ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.