ಶಿವಮೊಗ್ಗ : ಜಿಲ್ಲೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, 15 ದಿನದಲ್ಲಿ ಹಸೆಮಣೆ ಏರಬೇಕಾಗಿದ್ದ ಯುವತಿಯ ದಾರುಣ ಸಾವಾಗಿದೆ. ಹೌದು, ಮಲವಗೊಪ್ಪದ ಬಳಿ ಸಂಭವಿಸಿದ ಬೈಕ್ ಅಪಘಾತದಲ್ಲಿ ಯುವತಿ ಮೃತಪಟ್ಟಿದ್ದಾಳೆ.
ಮೃತಳನ್ನು ಕವಿತಾ (26) ಎಂದು ಗುರುತಿಸಲಾಗಿದೆ. ಆಕೆ ತನ್ನ ಸಹೋದರರ ಜೊತೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಬೈಕ್ ನಲ್ಲಿ ಲಗೇಜ್ ತೆಗೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬ ಇವರ ಬೈಕ್ ಗೆ ತಾಗಿಸಿದ್ದಾನೆ. ನಿಯಂತ್ರಣ ತಪ್ಪಿದ ಆಕೆಯ ಸಹೋದರ ಫುಟ್ ಬಾತ್ ಮೇಲೆ ಬಿದ್ದರೆ , ಆಕೆ ರಸ್ತೆಗೆ ಬಿದ್ದಿದ್ದಾಳೆ. ಪರಿಣಾಮ ವೇಗವಾಗಿ ಬರುತ್ತಿದ್ದ ಸಿಟಿ ಬಸ್ ಆಕೆಯ ಮೇಲೆ ಹರಿದಿದೆ. ಗಂಭೀರವಾಗಿ ಗಾಯಗೊಂಡ ಕವಿತಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
15 ದಿನದಲ್ಲಿ ಹಸೆಮಣೆ ಏರಬೇಕಿದ್ದ ಯುವತಿ ಅಪಘಾತದಲ್ಲಿ ಮೃತಪಟ್ಟಿದ್ದು, ಮದುವೆಯ ಸಂಭ್ರಮದಲ್ಲಿದ್ದ ಕವಿತಾ ಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ. ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
You Might Also Like
TAGGED:ಶಿವಮೊಗ್ಗ