HomeLatest NewsBREAKING : ಶಿವಮೊಗ್ಗದಲ್ಲಿ ಭೀಕರ ಅಪಘಾತ : ಆಟೋ ಪಲ್ಟಿಯಾಗಿ ತಲೆ ಮೇಲೆ ಬಿದ್ದು ಸ್ಥಳದಲ್ಲೇ...

BREAKING : ಶಿವಮೊಗ್ಗದಲ್ಲಿ ಭೀಕರ ಅಪಘಾತ : ಆಟೋ ಪಲ್ಟಿಯಾಗಿ ತಲೆ ಮೇಲೆ ಬಿದ್ದು ಸ್ಥಳದಲ್ಲೇ ಚಾಲಕ ಸಾವು.!

ಶಿವಮೊಗ್ಗ : ಶಿವಮೊಗ್ಗದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಆಟೋ ಪಲ್ಟಿಯಾಗಿ ತಲೆ ಮೇಲೆ ಬಿದ್ದು ಸ್ಥಳದಲ್ಲೇ ಚಾಲಕ ಸಾವನ್ನಪ್ಪಿದ ಘಟನೆ ನಡೆದಿದೆ.

ನಗರದ ಮಾತೃಭೂಮಿ ಆಟೋ ನಿಲ್ದಾಣದ ಬಳಿ ಈ ಘಟನೆ ನಡೆದಿದೆ. ಮೃತರನ್ನು ಆಟೋ ಚಾಲಕ ಜಪ್ಪುಲ್ಲಾ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಕೆಲವು ಪ್ರಯಾಣಿಕರಿಗೆ ಗಾಯಗಳಾಗಿದೆ.

ಅಪಘಾತದಿಂದ ಆಟೋ ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪರಿಣಾಮ ಚಾಲಕ ಆಟೋದಿಂದ ಹೊರಗೆ ಬಿದ್ದಿದ್ದು, ಅವರ ತಲೆ ಮೇಲೆ ಆಟೋ ಪಲ್ಟಿ ಹೊಡೆದಿದೆ.ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular