ಶಿವಮೊಗ್ಗ : ನಿಂತಿದ್ದ ಲಾರಿಗೆ ಬಸ್ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ಶಿವಮೊಗ್ಗದ ಗಾಜನೂರು ಸಮೀಪ ನಡೆದಿದೆ.
ಮಂಗಳೂರಿನಿಂದ ಚಿತ್ರದುರ್ಗ ಚಳ್ಳಕೆರೆಗೆ ಹೋಗುತ್ತಿದ್ದ ಬಸ್ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬಸ್ ಕಂಡಕ್ಟರ್ ಅಣ್ಣಪ್ಪ, ಹಾಗೂ ಹರ್ಷಿತಾ ಎಂಬುವವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಾಳುಗಳಿಗೆ ಶಿವಮೊಗ್ಗದ ಮೆಗ್ಗಾನ್ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಗಾಜನೂರಿನ ಅರಣ್ಯ ಇಲಾಖೆ ಚೆಕ್ ಪೋಸ್ಟ್ ಬಳಿ ಈ ಘಟನೆ ನಡೆದಿದ್ದು, ಗಾಯಗೊಂಡ 10 ಮಂದಿ ಪ್ರಯಾಣಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.