ಶಿವಮೊಗ್ಗ : ಕೆಟ್ಟು ನಿಂತಿದ್ದ ಲಾರಿಗೆ ಬಸ್ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ಶಿವಮೊಗ್ಗದ ತೀರ್ಥಹಳ್ಳಿ ರಸ್ತೆಯಲ್ಲಿ ನಡೆದಿದೆ.
ಮಂಗಳೂರಿನಿಂದ ಚಿತ್ರದುರ್ಗ ಚಳ್ಳಕೆರೆಗೆ ಹೋಗುತ್ತಿದ್ದ ದುರ್ಗಾಂಬ ಬಸ್ ಕೆಟ್ಟು ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬಸ್ ಕಂಡಕ್ಟರ್ ಅಣ್ಣಪ್ಪ (40) ಹಾಗೂ ಹರ್ಷಿತಾ (35) ಎಂಬುವವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಗೊಂಡ 13 ಮಂದಿಗೆ ಶಿವಮೊಗ್ಗದ ಮೆಗ್ಗಾನ್ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಗಾಜನೂರಿನ ಅರಣ್ಯ ಇಲಾಖೆ ಚೆಕ್ ಪೋಸ್ಟ್ ಬಳಿ ಈ ಘಟನೆ ನಡೆದಿದ್ದು, ಗಾಯಗೊಂಡ 10 ಮಂದಿ ಪ್ರಯಾಣಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
You Might Also Like
TAGGED:ಶಿವಮೊಗ್ಗ