ಕೋಲಾರ : ರಾಜ್ಯದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಮರಕ್ಕೆ ಕಾರು ಡಿಕ್ಕಿಯಾಗಿ ಗರ್ಭಿಣಿ ರುಂಡ ಕಟ್ ಆಗಿ ಬಿದ್ದ ಘಟನೆ ಕೋಲಾರದ ಮಾಲೂರಿನಭಾವನಹಳ್ಳಿ ರಸ್ತೆಯ ಪುರ ಗೇಟ್ ಬಳಿ ನಡೆದಿದೆ.
ಗರ್ಭಿಣಿ ಅರ್ಚನಾ ಅವರನ್ನು ಅವರ ಮಾವ ನಾರಾಯಣಸ್ವಾಮಿ ಅವರ ಗ್ರಾಮ ಕೊರಚನೂರಿಗೆ ಕರೆದುಕೊಂಡು ಹೋಗುತ್ತಿದ್ದರು. ಈ ವೇಳೆ ಎದುರಿಗೆ ಲಾರಿಯೊಂದು ಬಂದಿದ್ದು, ಅದನ್ನು ತಪ್ಪಿಸಲು ಹೋಗಿ ಮರಕ್ಕೆ ಡಿಕ್ಕಿ ಹೊಡೆದಿದ್ದಾರೆ. ಪರಿಣಾಮ ಕಾರಿನಲ್ಲಿದ್ದ ಅರ್ಚನಾ ದೇಹದಿಂದ ರುಂಡ ಹಾಗೂ ಎಡಗೈ ಭಾಗ ಪ್ರತ್ಯೇಕವಾಗಿದೆ.
ಪರಿಣಾಮ ಸ್ಥಳದಲ್ಲೇ ಮಹಿಳೆ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಚಾಲಕ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
TAGGED:ಭೀಕರ ಅಪಘಾತ