ಮೈಸೂರು : ಮೈಸೂರು ರಿಂಗ್ ರಸ್ತೆಯ ನಾರಾಯಣ ಹೃದಯಾಲಯದ ಬಳಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಭೀಕರ ಅಪಘಾತ ಸಂಭವಿಸಿದೆ.
ಕಾರು ಚಲಾಯಿಸುತ್ತಿದ್ದ ಚಾಲಕ ಇದ್ದಕ್ಕಿದ್ದಂತೆ ನಿಯಂತ್ರಣ ಕಳೆದುಕೊಂಡಿದ್ದಾನೆ. ಪರಿಣಾಮ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ನಿಲ್ಲಿಸಿದ ಕೆಲವು ಬೋರ್ಡ್ ಗಳು , ಕಂಬಗಳು ನೆಲಕ್ಕೆ ಉರುಳಿದೆ. ಪಕ್ಕದಲ್ಲೇ ಬೈಕ್ ನಲ್ಲಿ ಹೋಗುತ್ತಿದ್ದ ಬೈಕ್ ಸವಾರರೊಬ್ಬರು ಜಸ್ಟ್ ಮಿಸ್ ಆಗಿದ್ದಾರೆ. ಕಾರಿನಲ್ಲಿ ಮಹಿಳೆ ಸೇರಿದಂತೆ ನಾಲ್ವರು ಪ್ರಯಾಣಿಸುತ್ತಿದ್ದರು. ಅದೃಷ್ಟವಶಾತ್ ಯಾರಿಗೂ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಘಟನೆಯ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದೆ.