HomeKarnatakaBREAKING : ಬೆಂಗಳೂರಿನಲ್ಲಿ ಘೋರ ಘಟನೆ : ಇಬ್ಬರು ಮಕ್ಕಳನ್ನು ಕೊಂದು ದಂಪತಿ ಆತ್ಮಹತ್ಯೆ

BREAKING : ಬೆಂಗಳೂರಿನಲ್ಲಿ ಘೋರ ಘಟನೆ : ಇಬ್ಬರು ಮಕ್ಕಳನ್ನು ಕೊಂದು ದಂಪತಿ ಆತ್ಮಹತ್ಯೆ

ಬೆಂಗಳೂರು : ಬೆಂಗಳೂರಿನಲ್ಲಿ ಘೋರ ಘಟನೆ ನಡೆದಿದ್ದು, ಇಬ್ಬರು ಮಕ್ಕಳನ್ನು ಕೊಂದು ದಂಪತಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ವೈಟ್ ಫೀಲ್ಡ್ ಬಳಿ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಾರ್ಟ್ ಮೆಂಟ್ ಒಂದರಲ್ಲಿ ಘಟನೆ ನಡೆದಿದೆ.
ಪತಿ ವೀರಾರ್ಜುನ ವಿಜಯ್ (31) ಪತ್ನಿ ಹೇಮಾವತಿ (29) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಇವರು ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಇಬ್ಬರು ಮಕ್ಕಳನ್ನು ಕೊಂದಿದ್ದಾರೆ ಎಂದು ಹೇಳಲಾಗಿದೆ. ಎರಡೂವರೆ ವರ್ಷದ ಮೋಕ್ಷ ಹಾಗೂ ನಾಲ್ಕು ವರ್ಷದ ಸೃಷ್ಟಿ ಎಂಬ ಇಬ್ಬರು ಹೆಣ್ಣು ಮಕ್ಕಳು ಬಲಿಯಾಗಿದ್ದಾರೆ.

ಕಳೆದ 3 ದಿನಗಳ ಹಿಂದೆಯೇ ಈ ಘಟನೆ ನಡೆದಿದ್ದು, ಆದರೆ ತಡವಾಗಿ ಬೆಳಕಿಗೆ ಬಂದಿದೆ. 3 ದಿನ ಆದರೂ ಮನೆ ಬಾಗಿಲು ತೆರೆಯದ ಹಿನ್ನೆಲೆ ಅನುಮಾನಗೊಂಡ ಸ್ಥಳೀಯರು ಕಿಟಕಿ ಮೂಲಕ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ನಂತರ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಬಾಗಿಲು ಒಡೆದು ಪರಿಶೀಲನೆ ನಡೆಸಿದ್ದಾರೆ. ನಾಲ್ವರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular