ಬೆಂಗಳೂರು : ಡೆತ್ ನೋಟ್ ಬರೆದಿಟ್ಟು 7 ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಸಿಕೆ ಅಚ್ಚುಕಟ್ಟು ಎಂಬಲ್ಲಿ ಈ ಘಟನೆ ನಡೆದಿದೆ. ಮೃತ ಬಾಲಕನನ್ನು 7 ನೇ ತರಗತಿ ವಿದ್ಯಾರ್ಥಿ ಗಾಂಧಾರ್ ಎಂದು ಗುರುತಿಸಲಾಗಿದೆ. ಬಾಲಕನ ತಂದೆ ರೂಮ್ ಗೆ ಹೋಗಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಬಾಲಕನ ತಂದೆ ಮ್ಯೂಸಿಕ್ ಆರ್ಟಿಸ್ಟ್ ಆಗಿ ಕೆಲಸ ಮಾಡುತ್ತಿದ್ದರು.
ನನ್ನನ್ನು ಕ್ಷಮಿಸಿ ಎಂದು ಡೆತ್ ನೋಟ್ ಬರೆದಿಟ್ಟು ಬಾಲಕ ಸೂಸೈಡ್ ಮಾಡಿಕೊಂಡಿದ್ದು, ಸಿಕೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.