ಹಾವೇರಿ : ಕೆರೆಗೆ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾವೇರಿಯ ದೇವಗಿರಿಯಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಉಲ್ಲಾಸ್ (22) ಎಂದು ಗುರುತಿಸಲಾಗಿದೆ. ಹಾವೇರಿಯಲ್ಲಿ ಇಂಜಿನಿಯರಿಂಗ್ 2 ನೇ ಸೆಮಿಸ್ಟರ್ ಓದುತ್ತಿದ್ದ ವಿದ್ಯಾರ್ಥಿ ಕೆರೆಗೆ ಹಾರಿ ಸೂಸೈಡ್ ಮಾಡಿಕೊಂಡಿದ್ದಾನೆ.
ಹಾವೇರಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಉಲ್ಲಾಸ್ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

