ಕೋಲಾರ : ನೀರೆಂದು ಭಾವಿಸಿ ಕೀಟನಾಶಕ ಕುಡಿದು ಇಬ್ಬರು ಕಾರ್ಮಿಕರು ಸಾವನ್ನಪ್ಪಿದ ಘಟನೆ ಕೋಲಾರದಲ್ಲಿ ನಡೆದಿದೆ.
ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ರಾಯಲ್ಪಾಡು ಗ್ರಾಮದಲ್ಲಿ ನಡೆದಿದೆ. ಮೃತರನ್ನು ದೇವಪ್ಪ (60) ದಾಸಪ್ಪ(62) ಎಂದು ಗುರುತಿಸಲಾಗಿದೆ.
ಕೋಳಿಫಾರಂಗೆ ಗೊಬ್ಬರ ತುಂಬಲು ಹೋಗಿದ್ದ ಇಬ್ಬರು ಕಾರ್ಮಿಕರು ನೀರೆಂದು ಭಾವಿಸಿ ಕೀಟನಾಶಕ ಸೇವಿಸಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲು ಯತ್ನಿಸಿದರೂ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ.
TAGGED:ಕೀಟನಾಶಕ