HomeKarnatakaBREAKING : ಮಂಡ್ಯದಲ್ಲಿ ಒಂದೇ ಕುಟುಂಬದ ಮೂವರು ನಿಗೂಢ ಸಾವು : ತಂದೆ ನೇಣಿಗೆ ಶರಣು,...

BREAKING : ಮಂಡ್ಯದಲ್ಲಿ ಒಂದೇ ಕುಟುಂಬದ ಮೂವರು ನಿಗೂಢ ಸಾವು : ತಂದೆ ನೇಣಿಗೆ ಶರಣು, ತಾಯಿ-ಮಗ ಶವವಾಗಿ ಪತ್ತೆ

ಮಂಡ್ಯ: ನಗರದ ನೆಹರು ನಗರದಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ಘಟನೆ ತೀವ್ರ ಸಂಚಲನ ಮೂಡಿಸಿದೆ. ಪ್ರಭಾಕರ್, ಅವರ ಪತ್ನಿ ಜ್ಯೋತಿ ಹಾಗೂ ಪುತ್ರ ಸಂತೋಷ್ ಮೃತರು ಎಂದು ಗುರುತಿಸಲಾಗಿದೆ.

ಮಾಹಿತಿಯ ಪ್ರಕಾರ, ಕಳೆದ ರಾತ್ರಿ ಜ್ಯೋತಿ ಮತ್ತು ಅವರ ಪುತ್ರ ಸಂತೋಷ್ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಈ ಘಟನೆ ಕುಟುಂಬಸ್ಥರು ಹಾಗೂ ಸ್ಥಳೀಯರನ್ನು ಬೆಚ್ಚಿಬೀಳುವಂತೆ ಮಾಡಿದೆ. ಈ ನಡುವೆ ಇಂದು ಬೆಳಿಗ್ಗೆ ಪ್ರಭಾಕರ್ ಅವರು ತಮ್ಮ ಬಟ್ಟೆ ಅಂಗಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಮೃತ ಸಂತೋಷ್ ಅವರಿಗೆ ಕೇವಲ ಒಂದು ತಿಂಗಳ ಹಿಂದೆಯಷ್ಟೇ ವಿವಾಹವಾಗಿತ್ತು ಎಂದು ತಿಳಿದುಬಂದಿದೆ. ಹೊಸದಾಗಿ ವೈವಾಹಿಕ ಜೀವನ ಆರಂಭಿಸಿದ್ದ ಯುವಕನ ಸಾವಿನಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಾಯಿ ಹಾಗೂ ಮಗನ ಸಾವಿಗೆ ಕಾರಣವೇನು, ಬಳಿಕ ಪ್ರಭಾಕರ್ ಆತ್ಮಹತ್ಯೆಗೆ ಶರಣಾಗಲು ಕಾರಣವೇನು ಎಂಬುದರ ಕುರಿತು ತನಿಖೆ ನಡೆಸಲಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ವರದಿ ಬಂದ ಬಳಿಕ ಸಾವಿನ ನಿಖರ ಕಾರಣ ತಿಳಿಯುವ ಸಾಧ್ಯತೆ ಇದೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಎಲ್ಲ ಆಯಾಮಗಳಲ್ಲೂ ತನಿಖೆ ಮುಂದುವರಿಸಿದ್ದಾರೆ. ಒಂದೇ ಕುಟುಂಬದ ಮೂವರು ಅಸಹಜವಾಗಿ ಮೃತಪಟ್ಟಿರುವ ಘಟನೆ ಮಂಡ್ಯ ನಗರದಲ್ಲಿ ಆತಂಕ ಮತ್ತು ದುಃಖದ ವಾತಾವರಣ ಸೃಷ್ಟಿಸಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular