HomeKarnatakaSHOCKING : ಪರಪುರುಷನ ಜೊತೆ ಓಡಿ ಹೋದ ಪತ್ನಿ ; ತುಮಕೂರಲ್ಲಿ ಇಬ್ಬರು ಮಕ್ಕಳನ್ನು ಕೊಂದು...

SHOCKING : ಪರಪುರುಷನ ಜೊತೆ ಓಡಿ ಹೋದ ಪತ್ನಿ ; ತುಮಕೂರಲ್ಲಿ ಇಬ್ಬರು ಮಕ್ಕಳನ್ನು ಕೊಂದು ನೇಣಿಗೆ ಶರಣಾದ ಪತಿ.!

ತುಮಕೂರು ಜಿಲ್ಲೆಯ ಕುಣಿಗಲ್‌ನಲ್ಲಿ ಮನಕಲಕುವ ಘಟನೆ ನಡೆದಿದೆ. ಕೌಟುಂಬಿಕ ಜಗಳದಿಂದ ಪತ್ನಿ ಮನೆ ಬಿಟ್ಟು ಹೋದ ಹಿನ್ನೆಲೆಯಲ್ಲಿ, ನೊಂದ ಅರ್ಚಕನೊಬ್ಬ ತನ್ನ ಹತ್ತು ಮತ್ತು ಐದು ವರ್ಷದ ಇಬ್ಬರು ಹಸುಗೂಸುಗಳ ಕತ್ತು ಹಿಸುಕಿ ಕೊಲೆ ಮಾಡಿ, ಬಳಿಕ ತಾನೂ ನೇಣಿಗೆ ಶರಣಾಗಿದ್ದಾನೆ. ಮಲ್ಲೇಶ್ವರ ಸ್ವಾಮಿ ದೇವಸ್ಥಾನದ ಅರ್ಚಕ ಶಿವಣ್ಣ ಹಾಗೂ ಅವರ ಇಬ್ಬರು ಪುತ್ರರು ಈ ದುರಂತದಲ್ಲಿ ಸಾವನ್ನಪ್ಪಿದ್ದಾರೆ.

ಜಿಲ್ಲೆಯ ಕುಣಿಗಲ್ ತಾಲೂಕಿನ ಆಲ್ಕೆರೆ ಗ್ರಾಮದಲ್ಲಿ ಕೌಟುಂಬಿಕ ಕಲಹವೊಂದು ಭೀಕರ ದುರಂತದಲ್ಲಿ ಅಂತ್ಯಗೊಂಡಿದೆ. ಗ್ರಾಮದ ಮಲ್ಲೇಶ್ವರ ಸ್ವಾಮಿ ದೇವಸ್ಥಾನದ ಅರ್ಚಕರಾಗಿದ್ದ ಶಿವಣ್ಣ (40) ಎಂಬುವವರು ತಮ್ಮ ಇಬ್ಬರು ಮಕ್ಕಳಾದ ಜೀವನ್ (10) ಹಾಗೂ ಪ್ರಾಣೇಶ್ (5) ಅವರನ್ನು ಕತ್ತು ಹಿಸುಕಿ ಬಲಿಪಡೆದು, ನಂತರ ತಾವೂ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

: ವರದಿಗಳ ಪ್ರಕಾರ, ಶಿವಣ್ಣ ಹಾಗೂ ಅವರ ಪತ್ನಿ ಮಂಜುಳಾ ಅವರ ನಡುವೆ ಕಳೆದ ಕೆಲವು ದಿನಗಳಿಂದ ತೀವ್ರ ಕೌಟುಂಬಿಕ ಕಲಹ ನಡೆಯುತ್ತಿತ್ತು. ಜಗಳದ ಬಳಿಕ ಪತ್ನಿ ಮಂಜುಳಾ ಅವರು ಪತಿಯನ್ನು ಬಿಟ್ಟು ಮನೆ ತೊರೆದಿದ್ದರು. ಇದರಿಂದ ತೀವ್ರವಾಗಿ ಮನನೊಂದಿದ್ದ ಶಿವಣ್ಣ, ಜೀವನದಲ್ಲಿ ಜಿಗುಪ್ಸೆಗೊಂಡು ಮಕ್ಕಳೊಂದಿಗೆ ಈ ಅಂತಿಮ ನಿರ್ಧಾರ ಕೈಗೊಂಡಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular