BREAKING : ತುಮಕೂರಿನಲ್ಲಿ ಘೋರ ಘಟನೆ : ಕೆರೆಯಲ್ಲಿ ಈಜಲು ಹೋದ ಇಬ್ಬರು ಬಾಲಕರು ಸಾವು

ತುಮಕೂರು : ಕೆರೆಯಲ್ಲಿ ಈಜಲು ಹೋದ ಇಬ್ಬರು ಬಾಲಕರು ದುರ್ಮರಣಕ್ಕೀಡಾದ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ತಿಮ್ಮನಹಳ್ಳಿ ಬಳಿ ನಡೆದಿದೆ.

ಮೃತ ಬಾಲಕರನ್ನು ರಾಕೇಶ್ (14) ಧನುಷ್ (15 ) ಎಂದು ಗುರುತಿಸಲಾಗಿದೆ. ಇಂದು ಇಬ್ಬರು ಹುಡುಗರು ಕೆರೆಗೆ ಈಜಲು ಹೋಗಿದ್ದು, ಮೇಲೆ ಬಾರಲು ಆಗದೇ ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಈ ಸಂಬಂಧ ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಧಾವಿಸಿದ್ದಾರೆ. ಮೃತ ಬಾಲಕರ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read