ಯಾದಗಿರಿ : ಯಾದಗಿರಿಯಲ್ಲಿ ಘೋರ ಘಟನೆಯೊಂದು ನಡೆದಿದ್ದು, ಶಾಲಾ ಆವರಣದಲ್ಲೇ ನೇಣು ಬಿಗಿದುಕೊಂಡು 9 ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಯಾದಗಿರಿಯಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಬಾಲಕನನ್ನು ವಡಗೇರ ನಿವಾಸಿ 9 ನೇ ತರಗತಿ ವಿದ್ಯಾರ್ಥಿ ಪವನ್ (15) ಎಂದು ಗುರುತಿಸಲಾಗಿದೆ. ಶಾಲೆಯ ಸಮಯದಲ್ಲೇ ಶಾಲಾ ಹಿಂಭಾಗದಲ್ಲಿ ಪವನ್ ಸೂಸೈಡ್ ಮಾಡಿಕೊಂಡಿದ್ದಾನೆ.
ಪವನ್ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿಕ್ಕ ವಯಸ್ಸಿನಲ್ಲಿ ಮಕ್ಕಳು ದುಡುಕಿ ಆತ್ಮಹತ್ಯೆಯಂತಹ ನಿರ್ಧಾರ ತೆಗೆದುಕೊಳ್ಳುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

