HomeLatest Newsದಂಪತಿ ಮಲಗಿದ್ದ ವೇಳೆ ದಾರುಣ ಘಟನೆ: ನೀರು ತುಂಬಿದ್ದ ಬಕೆಟ್ ಗೆ ಬಿದ್ದು ಮಗು ಸಾವು

ದಂಪತಿ ಮಲಗಿದ್ದ ವೇಳೆ ದಾರುಣ ಘಟನೆ: ನೀರು ತುಂಬಿದ್ದ ಬಕೆಟ್ ಗೆ ಬಿದ್ದು ಮಗು ಸಾವು

ರಾಮನಗರ: ಬೆಂಗಳೂರು ದಕ್ಷಿಣ ಜಿಲ್ಲೆ ಚನ್ನಪಟ್ಟಣದಲ್ಲಿ ನೀರು ತುಂಬಿದ್ದ ಬಕೆಟ್ ನಲ್ಲಿ ಬಿದ್ದು ಒಂದು ವರ್ಷದ ಮಗು ಮುಳುಗಿ ಸಾವನ್ನಪ್ಪಿದೆ.

ಚನ್ನಪಟ್ಟಣದ ಜೀವನಪುರ ಬಡಾವಣೆಯಲ್ಲಿ ಘಟನೆ ನಡೆದಿದೆ. ಸಂಶಾದ್ ಪಠಾಣ್ ಮತ್ತು ಮುಷ್ಕಾನ್ ದಂಪತಿಯ ಪುತ್ರಿ ಖುಷಿ ಮೃತಪಟ್ಟ ಮಗು. ದಂಪತಿ ಮಧ್ಯಾಹ್ನ ಮಲಗಿದ್ದ ವೇಳೆ ಮನೆ ಹಾಲ್ ಒರೆಸಲು ನೀರು ತುಂಬಿಟ್ಟಿದ್ದರು. ಆಟವಾಡಿಕೊಂಡಿದ್ದ ಮಗು ಬಕೆಟ್ ನಲ್ಲಿ ಮುಳುಗಿ ಮೃತಪಟ್ಟಿದೆ. ಮುಷ್ಕಾನ್ ಎದ್ದು ನೋಡಿದಾಗ ನೀರಿನ ಬಕೆಟ್ ನಲ್ಲಿ ಮಗು ಬಿದ್ದಿರುವುದು ಕಂಡುಬಂದಿದೆ. ಕೂಡಲೇ ಮಗುವನ್ನು ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಪರೀಕ್ಷೆ ನಡೆಸಿದ ವೈದ್ಯರು ಮಗು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಚನ್ನಪಟ್ಟಣ ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular