HomeCrimeಬೆಚ್ಚಿಬೀಳಿಸುವಂತಿದೆ ಭೀಕರ ಅಪಘಾತದ ವಿಡಿಯೋ

ಬೆಚ್ಚಿಬೀಳಿಸುವಂತಿದೆ ಭೀಕರ ಅಪಘಾತದ ವಿಡಿಯೋ

ಉತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿ ನಿಯಂತ್ರಣ ತಪ್ಪಿದ ಬೈಕ್ ಸ್ಕೂಟರ್‌ಗೆ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದ ಘಟನೆ ಕ್ಯಾಮರಾದಲ್ಲಿ ಸೆರೆಯಾಗಿದೆ. ಅಪಘಾತದಲ್ಲಿ ಓರ್ವ ಸವಾರ ಸಾವನ್ನಪ್ಪಿದ್ದಾನೆ.

ಭೀಕರ ರಸ್ತೆ ಅಪಘಾತದ ದೃಶ್ಯ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಲಕ್ನೋದ ರಾಜಾಜಿಪುರಂನಲ್ಲಿ ಈ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವರದಿಗಳ ಪ್ರಕಾರ ಗಂಟೆಗೆ 120 ಕಿ.ಮೀ ವೇಗದಲ್ಲಿ ಬರುತ್ತಿದ್ದ ಬೈಕ್, ಸ್ಕೂಟರ್‌ಗೆ ಅಪ್ಪಳಿಸುತ್ತಿರುವ ವೀಡಿಯೊ ದೃಶ್ಯಾವಳಿಯನ್ನ ಸಿಸಿ ಕ್ಯಾಮೆರಾ ತೋರಿಸುತ್ತದೆ.

ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಸಿಸಿ ಕ್ಯಾಮೆರಾ ದೃಶ್ಯದ ಸಹಾಯದಿಂದ ಮೃತರನ್ನ ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular