HomeKarnatakaSHOCKING : ಬೆಂಗಳೂರಲ್ಲಿ ಭಯಾನಕ ಮರ್ಡರ್; ವ್ಯಕ್ತಿಯ ತಲೆ ಕತ್ತರಿಸಿ ಕ್ರಿಕೆಟ್ ಗ್ರೌಂಡ್‌ನಲ್ಲಿ ಎಸೆದ ಹಂತಕರು..!

SHOCKING : ಬೆಂಗಳೂರಲ್ಲಿ ಭಯಾನಕ ಮರ್ಡರ್; ವ್ಯಕ್ತಿಯ ತಲೆ ಕತ್ತರಿಸಿ ಕ್ರಿಕೆಟ್ ಗ್ರೌಂಡ್‌ನಲ್ಲಿ ಎಸೆದ ಹಂತಕರು..!

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಬೆಚ್ಚಿಬೀಳಿಸುವ ಕೊಲೆ ಪ್ರಕರಣವೊಂದು ಬೆಳಕಿಗೆ ಬಂದಿದೆ. ವರ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಕೊಡತಿ ಗೇಟ್ ಸಮೀಪ ದುಷ್ಕರ್ಮಿಗಳು ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಹತ್ಯೆಗೈದು, ತಲೆ ಕತ್ತರಿಸಿ ಸಮೀಪದ ಕ್ರಿಕೆಟ್ ಮೈದಾನದಲ್ಲಿ ಎಸೆದಿರುವ ಘಟನೆ ಸಂಚಲನ ಮೂಡಿಸಿದೆ.

ವರ್ತೂರು ಸಮೀಪದ ಕೊಡತಿ ಗೇಟ್‌ನಲ್ಲಿ ವ್ಯಕ್ತಿಯೊಬ್ಬನನ್ನು ಮಾರಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆಗೈದ ದುಷ್ಕರ್ಮಿಗಳು, ಬಳಿಕ ಆತನ ತಲೆಯನ್ನು ಕತ್ತರಿಸಿ ಸಮೀಪದ ಕ್ರಿಕೆಟ್ ಮೈದಾನದಲ್ಲಿ ಎಸೆದು ಪರಾರಿಯಾಗಿದ್ದಾರೆ. ಘಟನೆ ಸ್ಥಳಕ್ಕೆ ವರ್ತೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕೊಲೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.

ಮಾಹಿತಿಯ ಪ್ರಕಾರ, ಅಪರಿಚಿತ ವ್ಯಕ್ತಿಯನ್ನು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿದ ಆರೋಪಿಗಳು, ಬಳಿಕ ಆತನ ತಲೆಯನ್ನು ದೇಹದಿಂದ ಬೇರ್ಪಡಿಸಿ ಕ್ರಿಕೆಟ್ ಮೈದಾನದಲ್ಲಿ ಎಸೆದು ಪರಾರಿಯಾಗಿದ್ದಾರೆ. ಘಟನೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ವರ್ತೂರು ಠಾಣೆ ಪೊಲೀಸರು ಹಾಗೂ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೃತನ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದ್ದು, ಕೊಲೆಗೆ ನಿಖರ ಕಾರಣ ಏನು ಎಂಬುದು ಇನ್ನೂ ತಿಳಿದುಬಂದಿಲ್ಲ. ವೈಯಕ್ತಿಕ ದ್ವೇಷ, ಹಳೆಯ ವೈಷಮ್ಯ ಅಥವಾ ಇತರೆ ಕಾರಣಗಳ ಹಿನ್ನೆಲೆಯಲ್ಲಿ ಕೊಲೆ ನಡೆದಿದೆಯೇ ಎಂಬ ಎಲ್ಲಾ ಆಯಾಮಗಳಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸದ್ಯ ಸ್ಥಳದಲ್ಲಿ ವ್ಯಕ್ತಿಯ ತಲೆ ಮಾತ್ರ ಪತ್ತೆಯಾಗಿದ್ದು, ಉಳಿದ ದೇಹದ ಭಾಗ ಎಲ್ಲಿದೆ ಎಂದು ತಿಳಿದು ಬಂದಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸ್ಥಳದಲ್ಲಿ ಸಾಕ್ಷ್ಯಗಳನ್ನು ಸಂಗ್ರಹಿಸಿರುವ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದು, ಆರೋಪಿಗಳ ಪತ್ತೆಗೆ ವಿಶೇಷ ತಂಡವನ್ನು ರಚಿಸಲಾಗಿದೆ. ಈ ಭೀಕರ ಘಟನೆ ವರ್ತೂರು ಪ್ರದೇಶದ ನಿವಾಸಿಗಳಲ್ಲಿ ಆತಂಕಕ್ಕೆ ಕಾರಣವಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular