ಕೊಪ್ಪಳ : ಪಾಪಿ ಪತಿಯೋರ್ವ ಕೊಡಲಿಯಿಂದ ಕೊಚ್ಚಿ ಪತ್ನಿಯನ್ನು ಹತ್ಯೆಗೈದ ಆಘಾತಕಾರಿ ಘಟನೆ ಕೊಪ್ಪಳದ ಬೂದಗುಂಪ ಗ್ರಾಮದಲ್ಲಿ ನಡೆದಿದೆ.
ಶಿವಪ್ಪ ಎಂಬಾತ ಕೊಡಲಿಯಿಂದ ಕೊಚ್ಚಿ ಪತ್ನಿ ಗಂಗಮ್ಮ ದೊಣ್ಣೆ (38) ಎಂಬುವರನ್ನು ಹತ್ಯೆ ಮಾಡಿದ್ದಾನೆ.
ಪ್ರತಿನಿತ್ಯ ಪತಿ ಕುಡಿದು ಬಂದು ಗಲಾಟೆ ಮಾಡುತ್ತಿದ್ದನು ಎನ್ನಲಾಗಿದೆ. ಇದರಿಂದ ಪ್ರತಿನಿತ್ಯ ಗಂಡ ಹೆಂಡತಿ ನಡುವೆ ಜಗಳ ನಡೆಯುತ್ತಿತ್ತು. ಒಂದು ದಿನ ಜಗಳ ತಾರಕಕ್ಕೇರಿದ್ದು, ರೊಚ್ಚಿಗೆದ್ದ ಪತಿ ಪತ್ನಿ ಮಲಗಿದ್ದಾಗ ಕೊಡಲಿಯಿಂದ ಕೊಚ್ಚಿ ಕೊಂದು ಎಸ್ಕೇಪ್ ಆಗಿದ್ದಾನೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.
You Might Also Like
TAGGED:ಭಯಾನಕ ಮರ್ಡರ್