HomeIndiaBREAKING: ಬೆಳ್ಳಂಬೆಳಗ್ಗೆ ಟ್ರ್ಯಾಕ್ಟರ್ –ಕಾರ್ ಡಿಕ್ಕಿಯಾಗಿ ಭೀಕರ ಅಪಘಾತ: 7 ಜನ ಸ್ಥಳದಲ್ಲೇ ಸಾವು

BREAKING: ಬೆಳ್ಳಂಬೆಳಗ್ಗೆ ಟ್ರ್ಯಾಕ್ಟರ್ –ಕಾರ್ ಡಿಕ್ಕಿಯಾಗಿ ಭೀಕರ ಅಪಘಾತ: 7 ಜನ ಸ್ಥಳದಲ್ಲೇ ಸಾವು

ಖಗಾರಿಯಾ. ಬಿಹಾರದ ಖಗರಿಯಾ ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 7 ಜನ ಸಾವನ್ನಪ್ಪಿದ್ದಾರೆ.

ಅಪಘಾತದಲ್ಲಿ ಹಲವರು ಗಾಯಗೊಂಡಿದ್ದಾರೆ. ಮೃತರಲ್ಲಿ ಮೂವರು ಮಕ್ಕಳು ಸೇರಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಚೌತಮ್‌ ನ ಮೋಹನ್‌ ಪುರ ಢಮಾರಾದಿಂದ ಮದುವೆ ಮುಗಿಸಿ ವಾಪಸಾಗುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.

ಪರ್ಬಟ್ಟಾ ಬ್ಲಾಕ್‌ ನ ಬೆಸಾ ಗ್ರಾಮದ ನಿವಾಸಿ ಇಂದ್ರದೇವ್ ಠಾಕೂರ್ ಅವರ ಪುತ್ರನ ಮದುವೆಗೆ ತೆರಳಿ ವಾಪಸಾಗುತ್ತಿದ್ದ ವೇಳೆ ದುರಂತ ನಡೆದಿದೆ. ಪರ್ಬಟ್ಟಾದ ಬಿಥಾಲ ಗ್ರಾಮದಿಂದ ಹಿಂದಿರುಗುತ್ತಿದ್ದಾಗ ಸಿಮೆಂಟ್ ತುಂಬಿದ್ದ ಟ್ರ್ಯಾಕ್ಟರ್‌ಗೆ ಎಸ್‌ಯುವಿ ನೇರವಾಗಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎಕ್ಸ್ ಯುವಿಯಲ್ಲಿ ಪ್ರಯಾಣಿಸುತ್ತಿದ್ದ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸೋಮವಾರ ಬೆಳಗ್ಗೆ 6:30ಕ್ಕೆ ಘಟನೆ ವರದಿಯಾಗಿದೆ. ಪೊಲೀಸರು ಸ್ಥಳಕ್ಕೆ ತಲುಪಿದ್ದಾರೆ. ಪ್ರಕರಣದ ತನಿಖೆ ನಡೆಯುತ್ತಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular