HomeLatest NewsBREAKING : ಆಂಧ್ರಪ್ರದೇಶದಲ್ಲಿ ಘೋರ ದುರಂತ ; ಬಸ್ ಗೆ ಬೆಂಕಿ ತಗುಲಿ 14 ಮಂದಿ...

BREAKING : ಆಂಧ್ರಪ್ರದೇಶದಲ್ಲಿ ಘೋರ ದುರಂತ ; ಬಸ್ ಗೆ ಬೆಂಕಿ ತಗುಲಿ 14 ಮಂದಿ ಪ್ರಯಾಣಿಕರು ಸಜೀವ ದಹನ.!

ಆಂಧ್ರಪ್ರದೇಶ/ಮಾರ್ಕಾಪುರಂ: ಜಿಲ್ಲೆಯ ರಾಯವರಂ ಸಮೀಪ ಟಿಪ್ಪರ್ ಲಾರಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಭೀಕರ ಬೆಂಕಿ ಅವಘಡ ಸಂಭವಿಸಿದೆ. ಈ ದುರ್ಘಟನೆಯಲ್ಲಿ 14 ಮಂದಿ ಸಜೀವ ದಹನವಾಗಿದ್ದು, 15ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಅಪಘಾತದ ರೀತಿ: ಹೈದರಾಬಾದ್‌ನಿಂದ ಪಾಮೂರು ಕಡೆಗೆ ತೆರಳುತ್ತಿದ್ದ ‘ಹರೇ ಕೃಷ್ಣ ಟ್ರಾವೆಲ್ಸ್’ಗೆ ಸೇರಿದ ಖಾಸಗಿ ಬಸ್, ಸ್ಲೇಟ್ ಕ್ವಾರಿ ಬಳಿ ಟಿಪ್ಪರ್ ಲಾರಿಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್‌ನಲ್ಲಿ ತಕ್ಷಣವೇ ಬೆಂಕಿ ಕಾಣಿಸಿಕೊಂಡು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ.

ಪ್ರಯಾಣಿಕರ ವಿವರ: ಅಪಘಾತದ ಸಮಯದಲ್ಲಿ ಬಸ್‌ನಲ್ಲಿ ಸುಮಾರು 30 ಮಂದಿ ಪ್ರಯಾಣಿಕರಿದ್ದರು ಎನ್ನಲಾಗಿದೆ. ಬೆಂಕಿ ಆವರಿಸಿದ ಕೂಡಲೇ 14 ಮಂದಿ ಪ್ರಯಾಣಿಕರು ಹೇಗೋ ಹೊರಬಂದು ಜೀವ ಉಳಿಸಿಕೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಾವು-ನೋವು: ಮೃತಪಟ್ಟವರು ಕನಿಗಿರಿ ಮತ್ತು ಪಾಮೂರು ನಿವಾಸಿಗಳು ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ತಕ್ಷಣವೇ ಮಾರ್ಕಾಪುರಂ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವಿನ ಸಂಖ್ಯೆ ಇನ್ನು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಘಟನಾ ಸ್ಥಳಕ್ಕೆ ಮೂರು ಅಗ್ನಿಶಾಮಕ ವಾಹನಗಳು ಧಾವಿಸಿದ್ದು, ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಸದ್ಯಕ್ಕೆ ಬಸ್ ಮತ್ತು ಟಿಪ್ಪರ್ ಇನ್ನೂ ಬೆಂಕಿಯ ಕೆನ್ನಾಲಿಗೆಯಲ್ಲೇ ಸಿಲುಕಿವೆ.ಮಾರ್ಕಾಪುರಂ ಶಾಸಕ ಕಂದುಲ ನಾರಾಯಣರೆಡ್ಡಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ನಿಖರ ಕಾರಣವೇನು ಎಂಬ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಮಾಹಿತಿ ಪಡೆಯುತ್ತಿದ್ದಾರೆ.ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡಲು ಮತ್ತು ಪರಿಹಾರ ಕಾರ್ಯಾಚರಣೆಯನ್ನು ಚುರುಕುಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular